Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಮಲತಾ ಗೆಲ್ಲುತ್ತಾರೆ, ಟಿಕೆಟ್ ನೀಡಿ ಎಂದ ಕೆಸಿ ನಾರಾಯಣಗೌಡ

---Advertisement---

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆಗೆ ನುಗ್ಗುತ್ತಿದೆ. ಆದರೆ ಎಷ್ಟು ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಜೆಪಿ ಬಿಟ್ಟುಕೊಡಲಿದೆ ಎಂಬುದು ಮಾತ್ರ ಇನ್ನು ತೀರ್ಮಾನವಾಗಿಲ್ಲ. ಇದರ ಮಧ್ಯೆ ಹೆಚ್ಚು ಚರ್ಚೆಗೆ ಗ್ರಾಸವಾಗಿರುವುದು ಮಂಡ್ಯ ಕ್ಷೇತ್ರ.

ಕಳೆದ ಬಾರಿಯ ಮಂಡ್ಯ ವಿಧಾನಸಭಾ ಕ್ಷೇತ್ರದ ಚುನಾವಣೆ ಬಾರಿ ಜಿದ್ದಾಜಿದ್ದಿನ ಚುನಾವಣೆಯಾಗಿ ಮಾರ್ಪಟ್ಟಿತ್ತು. ಸುಮಲತಾ ವಿರುದ್ಧ ನಿಖಿಲ್ ಏನೇ ತಂತ್ರ ಮಾಡಿದರು ಗೆದ್ದಿದ್ದು ಮಾತ್ರ ಅಂಬರೀಶ್ ಅಭಿಮಾನ. ಈ ಬಾರಿ ಸುಮಲತಾ ಸ್ಪರ್ಧೆ ಕೂಡ ಅತಂತ್ರವಾಗುವ ಸಾಧ್ಯತೆ ಇದೆ. ಜೆಡಿಎಸ್ ಮಂಡ್ಯ ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ. ಇತ್ತ ಸುಮಲತಾ ಬೇರೆ ಸ್ವತಂತ್ರ ಅಭ್ಯರ್ಥಿಯಾಗಿದ್ರು. ಆದ್ರೆ ಇತ್ತಿಚೆಗೆ ಬಿಜೆಪಿ ಬೇರೆ ಸೇರಿದ್ದಾರೆ. ಮೈತ್ರಿಯಲ್ಲಿ ಒಂದು ವೇಳೆ ಮಂಡ್ಯ ಕ್ಷೇತ್ರ ಬಿಟ್ಟುಕೊಡಬೇಕಾಗಿ ಬಂದರೆ, ಸುಮಲತಾ‌ ಮುಂದಿನ ನಿರ್ಧಾರ ಏನು ಮಾಡ್ತಾರೆ ಅನ್ನೋ ಕುತೂಹಲವಿದೆ.

ಇದರ‌ ನಡುವೆ ಕೆಸಿ ನಾರಾಯಣಗೌಡ ಸುಮಲತಾ ಅವರಿಗೇನೆ ಬೆಂಬಲ ನೀಡಿದ್ದಾರೆ. ಜಿಲ್ಲೆಯಲ್ಲಿ ಜೆಡಿಎಸ್ ಪ್ರಭಾವ ಇದ್ದಿದ್ದರೆ ಕಳೆದ ಬಾರಿಯೇ ಗೆಲ್ಲುತ್ತಿದ್ದರು. ಆದರೆ ಅವರು ಸೋತಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ಜನ ಶಾಸಕರು ಇದ್ದರು. ಸಂಸದೆ ಸುಮಲತಾ‌ ಪಕ್ಷಕ್ಕೆ ಸಹಕಾರ ನೀಡಿದ್ದಾರೆ. ಹೀಗಾಗಿ ಈ ಬಾರಿ ಸುಮಲತಾಗೆ ಟಿಕೆಟ್ ನೀಡಬೇಕು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment