ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಸಮಯ ಹತ್ತಿರವಾಗುತ್ತಿದೆ. ಮಕ್ಕಳು ಪರೀಕ್ಷೆಂದು ಈಗಾಗಲೇ ತಯಾರಿ ಕೂಡ ಮಾಡಿಕೊಂಡಿದ್ದಾರೆ. ಇದರ ನಡುವೆ ಪರೀಕ್ಷೆ ಹಾಜರಾಗುವಾಗ ಕೆಲವೊಂದು ನಿಯಮಗಳನ್ನು ಅನುಸರಿಲೇಬೇಕಾಗಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗುತ್ತವೆ. ಈಗಾಗಲೇ ಶಿಕ್ಷಣ ಇಲಾಖೆ ಕೂಡ ಎಲ್ಲಾ ರೀತಿಯ ಸಿದ್ಧತೆಯನ್ನು ನಡೆಸಿದೆ. ಪರೀಕ್ಷೆಗೆ ಹಾಜರಾಗುವ ಮಕ್ಕಳು ಕೂಡ ಕೆಲವೊಂದು ನಿಯಮಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗಿದೆ. ಪರೀಕ್ಷೆಗೆ ಹಾಜರಾಗುವ ಮಕ್ಕಳು ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತೆ ಇಲ್ಲ.
ಇನ್ನು ಬಹಳ ಮುಖ್ಯವಾಗಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಯೇ ಪರೀಕ್ಷೆಗೆ ಹಾಜರಾಜಗಬೇಕು. ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ. ಹಿಜಾಬ್ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಾ ಇದೆ. ಹೀಗಾಗಿ ಕಳೆದ ಬಾರಿ ಪರೀಕ್ಷೆಗೆ ಏನೆಲ್ಲಾ ಕ್ರಮ ವಹಿಸಿದ್ದೆವೋ ಆ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಸಿಸಿಟಿವಿ ಅಳವಡಿಕೆಯೂ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.