ಬೆಂಗಳೂರು: ಮಾರ್ಚ್ 9 ರಿಂದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹೋಗುವ ಮಕ್ಕಳಿಗೆ ಅನುಕೂಲವಾಗಲಿ ಎಂದು KSRTC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಪರೀಕ್ಷೆ ಬರೆಯಲು ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಬಸ್ ಪ್ರಯಾಣ ಮಾಡಬಹುದು.
ಮಾರ್ಚ್ 9 ರಿಂದ ಮಾರ್ಚ್ 23ರ ತನಕ ಪರೀಕ್ಷೆ ನಡೆಯಲಿದ್ದು, ಅಷ್ಟು ದಿನ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದೆ. ಹಾಲ್ ಟಿಕೆಟ್ ತೋರಿಸಿ ಬಸ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ. ಇನ್ನು ವಿದ್ಯಾರ್ಥಿಗಳು ಮನವಿ ಮಾಡಿದರೆ ಬಸ್ ಪರೀಕ್ಷಾ ಕೊಠಡಿಗೆ ಹತ್ತಿರದಲ್ಲಿ ನಿಲ್ಲಿಸಲು ಸೂಚನೆ ಕೂಡ ನೀಡಿದೆ.
KSRTCಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಸಂಚಾರ ಮಾಡಬಹುದಾಗಿದೆ. ಈ ಉಚಿತ ಸೇವೆಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯನ ಮಂಡಳಿ ಅಧ್ಯಕ್ಷರು ಮನವಿ ಮಾಡಿಕೊಂಡ ಹಿನ್ನೆಲೆ ಬಸ್ ಬಿಡಲಾಗಿದೆ.