ಕೆಜಿಎಫ್ ಸಿನಿಮಾ ಇಡೀ ದೇಶವೇ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ. ಆ ಸಿನಿಮಾದಲ್ಲಿ ಹರೀಶ್ ರಾಯ್ ಅವರು ಕೂಡ ಗಮನ ಸೆಳೆದಿದ್ದರು. ಚಾಚಾ ಆಗಿನೇ ಎಲ್ಲರ ಮನಸ್ಸಲ್ಲಿ ಉಳಿದುಕೊಂಡಿದ್ದರು. ಇನ್ಮುಂದೆ ಈ ಚಾಚಾ ನೆನಪು ಮಾತ್ರ. ಇಂದು ಬೆಳಗ್ಗೆ 11 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಹರೀಶ್ ರಾಯ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. Kidwai ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಇತೀಚೆಗೆ ಹಲವು ಕನ್ನಡ ಸ್ಟಾರ್ಸ್ ಹರೀಶ್ ಅರೋಗ್ಯ ವಿಚಾರಿಸಿ ಸಹಾಯ ಮಾಡಿದ್ದರು.

ಥೈರಾಯ್ಡ್ ಕ್ಯಾನ್ಸರ್ ಖಾಯಿಲೆಯಿಂದ ಹಾಸಿಗೆ ಹಿಡಿದಿದ್ದರು. ಪ್ರತಿ ಇಂಜೆಕ್ಷನ್‌ಗೆ 3.55 ಲಕ್ಷ ರೂಪಾಯಿ ವೆಚ್ಚವಾಗ್ತಾ ಇತ್ತು. ಚಿಕಿತ್ಸೆಗಾಗಿ ಹಲವು ಕಲಾವಿದರ ಬಳಿ ನೆರವಿಗೆ ಅಂಗಲಾಚಿದ್ದರು. ಕರಾವಳಿ ಭಾಗದವರಾದ ಹರೀಶ್ ರಾಯ್ 90ರ ದಶಕದಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಮೆಜೆಸ್ಟಿಕ್, ಓಂ, ಕೆಜಿಎಫ್, ಸಂಜು ವೆಡ್ಸ್ ಗೀತಾ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಅಷ್ಟೇ ಅಲ್ಲ ಹಲವು ಸಿನಿಮಾಗಳಲ್ಲಿ ಖಳ ನಟರಾಗಿಯೂ ನಟಿಸಿದ್ದರು.
90 ರ ಕಾಲಘಟ್ಟದಲ್ಲಿ ಹರೀಶ್ ರಾಯ್ ಹೇರ್ ಸ್ಟೈಲ್ ಸಿಕ್ಕಾಪಟ್ಟೆ ಟ್ರೆಂಡ್ ಆಗಿತ್ತು. ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿ ಜೈಲು ವಾಸ ಅನುಭವಿಸಿದ್ದರು. ನಿರ್ಮಾಪಕ ಉಮಾಪತಿ ಶ್ರೀನಿವಾಸ್, ದರ್ಶನ್ ಅಭಿಮಾನಿ ಬಳಗದವರು ಸೇರಿದಂತೆ ಇನ್ನು ಹಲವಾರು ಮಂದಿ ನಟ, ನಟಿಯರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ನಟ ಯಶ್ ಸಹ ಈ ಹಿಂದೆಯೇ ತಮಗೆ ಸಹಾಯ ಮಾಡಿರುವುದಾಗಿ ಹರೀಶ್ ರಾಯ್ ಹೇಳಿಕೊಂಡಿದ್ದರು.
ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟ : ಗೃಹ ಸಚಿವ ಪರಮೇಶ್ವರ್ ಏನಂದ್ರು..? ☞ https://suddione.com/banquet-at-k-n-rajannas-house-what-did-home-minister-parameshwara-say/
RSS ಪಥ ಸಂಚಲನ : ಹೈಕೋರ್ಟ್ ನಲ್ಲಿ ಮತ್ತೆ ಸರ್ಕಾರಕ್ಕೆ ಹಿನ್ನಡೆ : ಡಿಕೆಶಿ ಫಸ್ಟ್ ರಿಯಾಕ್ಷನ್
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












