ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಈ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಸಿನಿಮಾದ ಹಾಡುಗಳನ್ನು ಬಳಸಿ ಸೋಷಿಯಲ್ ಮೀಡಿಯಾದಲ್ಲಿ ಹಾಕಲಾಗಿತ್ತು. ಈ ಸಂಬಂಧ ಎಂಅರ್ ಟಿ ಮ್ಯೂಸಿಕ್ ಸಂಸ್ಥೆ ಕೋರ್ಟ್ ಮೊರೆ ಹೋಗಿತ್ತು. ಇದೀಗ ಸಂಸ್ಥೆಗೆ ಜಯ ಸಿಕ್ಕಿದ್ದು, ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.
ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಈ ಸಂಬಂಧ ವಿಚಾರಣೆ ನಡೆಸಿ, ಆದೇಶ ನೀಡಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಅನುಮತಿ ಪಡೆಯದೆ ಕೆಜಿಎಫ್ ಹಾಡನ್ನು ಬಳಕೆ ಮಾಡಲಾಗಿದೆ. ಕಾರಣ ಕಾಂಗ್ರೆಸ್ ಅಧಿಕೃತ ಸೋಷಿಯಲ್ ಮೀಡಿಯಾವನ್ನು ಬ್ಲಾಕ್ ಮಾಡಲು ಕೋರ್ಟ್ ಆದೇಶ ನೀಡಿದೆ.