Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆ.ಎಚ್.ರಂಗನಾಥ್ ಮೊಮ್ಮಗ ಹರ್ಷವರ್ಧನ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ .02 : ಮಾಜಿ ಸಚಿವ ದಿವಂಗತ ಕೆ.ಎಚ್.ರಂಗನಾಥ್ ಅವರ ಮೊಮ್ಮಗ ಹರ್ಷವರ್ಧನ ( 33) ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಕಾಲಿಕವಾಗಿ ನಿಧನರಾದರು.

ತಂದೆ ಕೆಪಿಸಿಸಿ ಸದಸ್ಯ ವಿಜಯಕುಮಾರ್, ತಾಯಿ ಇದ್ದಾರೆ.
ಹಿರಿಯೂರು ತಾಲೂಕಿನ ಹೊಸಹೊಳನಾಡು  ಗ್ರಾಮದಲ್ಲಿರುವ ಕೆ.ಎಚ್.ರಂಗನಾಥ್ ಅವರ ಸಮಾಧಿ ಬಳಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಅಂತ್ಯಸಂಸ್ಜಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ : ಹಿರಿಯ ಮುತ್ಸದ್ಧಿ ರಾಜಕಾರಣಿ ಕೆ.ಎಚ್.ರಂಗನಾಥ್ ಅವರ ಕುಟುಂಬ ಕುಡಿ, ಕೆಪಿಸಿಸಿ ಸದಸ್ಯ ವಿಜಯಕುಮಾರ್ ಅವರ ಏಕೈಕ ಪುತ್ರ ಹರ್ಷವರ್ಧನ್ ನಿಧನ ಆಘಾತವನ್ನು ಉಂಟು ಮಾಡಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಿ ದೇಶದಲ್ಲಿ ಸೇವೆ ಮಾಡುವ ಸಂಕಲ್ಪ ಕೊಟ್ಟಿದ್ದ ಹರ್ಷವರ್ಧನ್, ಚಿಕ್ಕ ವಯಸ್ಸಿನಲ್ಲಿಯೇ ಸೇವಾ ಕಾರ್ಯದ ಮೂಲಕ ಜನಾನುರಾಗಿಯಾಗಿದ್ದರು.‌ ಇನ್ನೂ ಬಾಳಿ ಬದುಕಬೇಕಿದ್ದ ಹರ್ಷವರ್ಧನ್ ಅಕಾಲಿಕ ನಿಧನ ಅತ್ಯಂತ ನೋವು ತರಿಸಿದೆ

ಹರ್ಷವರ್ಧನ ಅವರ ನಿಧನದಿಂದ ನೊಂದಿರುವ ಕುಟುಂಬ ವರ್ಗಕ್ಕೆ ದುಖಃವನ್ನು ಭರಿಸುವ ಶಕ್ತಿ ಬುದ್ಧ, ಬಸವರು  ನೀಡಲೆಂದು ಪ್ರಾರ್ಥಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...