Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಮೇನಿ ಸಾವಿಗೆ ಕರ್ನಾಟಕದ ಈ ಗ್ರಾಮದಲ್ಲಿ ಶೋಕಾಚರಣೆ : ಬಿಕ್ಕಿ ಬಿಕ್ಕಿ ಅತ್ತ ಜನ

---Advertisement---

ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಿಂದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khameni) ಅವರ ಸಾವನ್ನಪ್ಪಿದ್ದು, ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲೂ ದುಃಖದ ಅಲೆ ಎಬ್ಬಿಸಿದೆ.

ಅಲಿಪುರ ಗ್ರಾಮದಲ್ಲಿ ಕಪ್ಪು ಬಾವುಟಗಳನ್ನು ಪ್ರದರ್ಶಿಸಿ, ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಜನರು ಖಮೇನಿ ಅವರನ್ನು ಸ್ಮರಿಸುತ್ತಿದ್ದಾರೆ. ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ.ಗ್ರಾಮದ ಅಂಜುಮನ್-ಎ-ಜಾಫ್ರಿಯಾ ಸಂಸ್ಥೆ ಈ ಶೋಕಾಚರಣೆಯನ್ನು ಆಯೋಜಿಸಿದೆ. ಸ್ಥಳೀಯ ನಾಯಕರು ಹೇಳುವಂತೆ, “ಖಮೇನಿ ನಮ್ಮ ಸಮುದಾಯದ ಆಧಾರ ಸ್ತಂಭ. ಅವರ ಸಾವು ನಮಗೆ ದೊಡ್ಡ ಆಘಾತ” ಎಂದು ಭಾವುಕರಾಗಿದ್ದಾರೆ.

ಅಲಿಪುರ ಗ್ರಾಮ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು 70 ಕಿ.ಮೀ. ಬೆಂಗಳೂರಿನಿಂದ ದೂರದಲ್ಲಿದೆ. ಇಲ್ಲಿನ ಜನಸಂಖ್ಯೆ ಸುಮಾರು 25,000, ಅದರಲ್ಲಿ 90% ಶಿಯಾ ಮುಸ್ಲಿಮರು. ಈ ಸಮುದಾಯಕ್ಕೆ ಇರಾನ್‌ನೊಂದಿಗೆ ಆಳವಾದ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಬಂಧಗಳಿವೆ. ಖಮೇನಿ ಅವರು ಶಿಯಾ ಇಸ್ಲಾಂನ ಕೇಂದ್ರ ವ್ಯಕ್ತಿ,ಗ್ರಾಮದಲ್ಲಿ ಖಮೇನಿ ಅವರ ಮಾರ್ಗದರ್ಶನವನ್ನು ಅನುಸರಿಸುತ್ತಾರೆ ಎಂದು ಹೇಳಲಾಗುತ್ತದೆ. 1981-82ರಲ್ಲಿ ಖಮೇನಿ ಅವರು ಅಲಿಪುರಕ್ಕೆ ಭೇಟಿ ನೀಡಿದ್ದರು ಎಂಬ ಐತಿಹಾಸಿಕ ನೆನಪುಗಳು ಇವೆ.

ಅನೇಕರ ಕುಟುಂಬ ಸದಸ್ಯರು ಇರಾನ್‌ನಲ್ಲಿ ವಾಸಿಸುತ್ತಿದ್ದಾರೆ. ಅನೇಕರು ಇರಾನ್‌ಗೆ ಧಾರ್ಮಿಕ ಪ್ರವಾಸ, ಅಧ್ಯಯನ ಅಥವಾ ವ್ಯಾಪಾರಕ್ಕಾಗಿ ಹೋಗಿದ್ದಾರೆ. ಯುದ್ಧದ ಭೀತಿಯನ್ನು ಹೆಚ್ಚಿಸಿದೆ. ಅಲಿಪುರ ಗ್ರಾಮಸ್ಥರು ತಮ್ಮ ಸಂಬಂಧಿಕರ ಸುರಕ್ಷತೆಗಾಗಿ ಆತಂಕದಲ್ಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now