Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖೇಲೋ ಇಂಡಿಯಾ ಯೋಜನೆ: ಷಟಲ್ ಬ್ಯಾಡ್ಮಿಂಟನ್: ಉಚಿತ ತರಬೇತಿ

---Advertisement---

ಚಿತ್ರದುರ್ಗ. ಸೆ.24 :   ಖೇಲೋ ಇಂಡಿಯಾ ಯೋಜನೆಯಡಿಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯನ್ನು ಹಂಚಿಕೆ ಮಾಡಿರುತ್ತಾರೆ. ಹೀಗಾಗಿ ಈ ಯೋಜನೆಯಡಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಚಿತ್ರದುರ್ಗ ನಗರದ ಬಾಲಕ ಮತ್ತು ಬಾಲಕಿಯರಿಗೆ ಉಚಿತ ತರಬೇತಿ ನೀಡಲಾಗುವುದು.

 

ಷಟಲ್ ಬ್ಯಾಡ್ಮಿಂಟನ್ ತರಬೇತಿ  ಪಡೆಯಲು ಇಚ್ಚಿಸುವ ಹಾಗೂ ಕ್ರೀಡಾ ಆಸಕ್ತಿಯುಳ್ಳ 6 ರಿಂದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರು  ಜಿ.ಕೆ.ಗುರುಮೂರ್ತಿ, ಖೇಲೋ ಇಂಡಿಯಾ ತರಬೇತುದಾರರು, ಒಳಾಂಗಣ ಕ್ರೀಡಾಂಗಣ, ಚಿತ್ರದುರ್ಗ ಇವರಲ್ಲಿ ಹೆಸರು ನೊಂದಾಯಿಸಬೇಕು. ಪಾಸ್‍ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರವನ್ನು ಅಕ್ಟೋಬರ್ 05 ರೊಳಗಾಗಿ ನೀಡುವಂತೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9481038141 ಕ್ಕೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment