ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲೆಲ್ಲಾ ಕಿಚ್ಚನ ಫ್ಯಾನ್ಸ್ ಹಾಗೂ ದರ್ಶನ್ ಫ್ಯಾನ್ಸ್ ವಾರ್ ಜೋರಾಗಿದೆ. ಹುಬ್ಬಳ್ಳಿಯಲ್ಲಿ ಕಿಚ್ಚ ಸುದೀಪ್ ನಾವೂ ಯುದ್ಧಕ್ಕೆ ಸಿದ್ಧ ಅಂದ್ರೆ ಅತ್ತ ದಾವಣಗೆರೆಯಲ್ಲಿ ವಿಜಯಲಕ್ಷ್ಮೀ, ದರ್ಶನ್ ಹೊರಗಿದ್ದಾಗ ಯಾರೂ ಮಾತಾಡ್ಲಿಲ್ಲ ಅಂದಿದ್ದಾರೆ. ಈ ಕಿಚ್ಚು ಸ್ವಲ್ಪ ಜೋರಾಗಿಯೇ ಹಚ್ಕೊಂಡಿದೆ. ಅಂದು ಹುಬ್ಬಳ್ಳಿಯಲ್ಲಿ ಸುದೀಪ್ ಆಡಿದ ಒಂದೊಂದು ಮಾತಿನ ಅರ್ಥ ಏನು..? ಅಪಾರ್ಥ ಆಗಿದ್ದೆಲ್ಲಿ ಎಂಬುದನ್ನ ಅವರ ಆಪ್ತ ರಾಜುಗೌಡ ತಿಳಿಸಿದ್ದಾರೆ.
ನಾನು ಮತ್ತು ಸುದೀಪ್ ಅವರು ಜೊತೆಯಲ್ಲಿ ಇದ್ದಾಗ ಅವರಿಗೆ ಒಂದು ಫೋನ್ ಬಂತು. ಈ ಬಾರಿ ನಿಮ್ಮ ವಿರುದ್ಧ ಭಾರಿ ಪ್ರಬಲವಾಗಿ ಪೈರಸಿ ಸಂಚು ನಡೆದಿದೆ. ಆದಷ್ಟು ನೀವೂ ನಿಮ್ಮ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿ ಅಂತ ಆ ಫೋನ್ ಕರೆಯಲ್ಲಿ ಹೇಳಲಾಯಿತು. ಸುದೀಪ್ ಅವರ ಅಭಿಮಾನಿಗಳ ಹೆಸರಲ್ಲಿ ನಕಲಿ ಸಂಘಗಳನ್ನು ಸೃಷ್ಟಿ ಮಾಡಿಕೊಂಡು ಏನೇನೋ ಹಾಕುತ್ತಿದ್ದಾರೆ. ಆ ವಿಚಾರವನ್ನೇ ಸುದೀಪ್ ಅವರು ವೇದಿಕೆಯಲ್ಲಿ ಮಾತನಾಡಿದ್ದು, ನಾವೆಲ್ಲರೂ ಯುದ್ಧಕ್ಕೆ ಸಿದ್ಧ ಅಂತ ಸುದೀಪ್ ಅವರು ಹೇಳಿದ್ದು, ಯಾವುದೇ ಒಬ್ಬ ಸ್ಟಾರ್ ನಟರ ವಿರುದ್ಧವಾಗಿ ಅಲ್ಲ. ಯಾವುದೇ ಒಂದು ಸಿನಿಮಾ ಬಗ್ಗೆಯೂ ಅವರು ಹೇಳಿಕೆ ನೀಡಿಲ್ಲ.
ಅವರು ಹೇಳಿದ್ದೇ ಬೇರೆ. ಇಲ್ಲಿ ಆಗುತ್ತಿರುವ ಚರ್ಚೆಯೇ ಬೇರೆ. ಪೈರಸಿ ವಿರುದ್ಧ ನಮ್ಮ ಹೋರಾಟ. ನಕಲಿ ಫ್ಯಾಬ್ಸ್ ಸಂಘಟನೆಗಳಿಂದ ಆಗುತ್ತಿರುವ ಅಪಪ್ರಚಾರ ಸರಿ ಅಲ್ಲ ಅಂತ ಸುದೀಪ್ ಹೇಳಿದ್ದು. ದರ್ಶನ್ ವಿರುದ್ಧವಾಗಿ ಸುದೀಪ್ ಅವರು ಹೇಳಿಕೆ ನೀಡಿಲ್ಲ. ಆ ರೀತಿಯ ಸಂದರ್ಭ ಕೂಡ ಇಲ್ಲ. ಯಾರಿಗೆ ತಟ್ಟಬೇಕೋ ತಟ್ಟುತ್ತೆ ಅಂತ ಸುದೀಪ್ ಅವರು ಹೇಳಿದ್ದು ಪೈರಸಿಯವರಿಗೆ ಎಂದಿದ್ದಾರೆ.

