ಶಿವಮೊಗ್ಗ: ಕರ್ನಾಟಕ ವಿಧಾನಸಭಾ ಚುನಾವಣೆಯ ಡೇಟ್ ಫಿಕ್ಸ್ ಆಗಿದೆ. ಈಗಾಗಲೇ ಮೂರು ಪಕ್ಷಗಳು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ. ಕಾಂಗ್ರೆಸ್ ಕೂಡ ತಮ್ಮ ಮೊದಲ ಪಟ್ಟಿ ರಿಲೀಸ್ ಮಾಡಿದ್ದು, ಅದರಲ್ಲಿ ತೀರ್ಥಹಳ್ಳಿ ಕ್ಷೇತ್ರಕ್ಕೆ ಕಿಮ್ಮನೆ ರತ್ನಾಕರ್ ಅವರಿಗೆ ಟಿಕೆಟ್ ನೀಡಿರಲಿಲ್ಲ. ಇದರಿಂದ ಚರ್ಚೆಗಳು ಶುರುವಾಗಿತ್ತು. ಬಂಡಾಯವೆದ್ದಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಧಾನ ಸಭೆ ಸಕ್ಸಸ್ ಆಗಿದೆ. ರೆಬೆಲ್ ಕಾಂಗ್ರೆಸ್ಸಿಗರ ಬಂಡಾಯ ಶಮನವಾಗಿದೆ. ಡಿಕೆ ಶಿವಕುಮಾರ್ ತೀರ್ಥಹಳ್ಳಿ ವಿಧಾನಸಭೆ ಕ್ಚೇತ್ರದ ಟಿಕೆಟ್ ಅನ್ನು ಕಿಮ್ಮನೆ ರತ್ನಾಕರ್ ಅವರಿಗೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬಳಿಕ ಮಾತನಾಡಿದ ಕಿಮ್ಮನೆ ರತ್ನಾಕರ್, ನನ್ನ ಮತ್ತು ಮಂಜುನಾಥ್ ಗೌಡ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಇಬ್ಬರು ಒಟ್ಟಿಹೆ ಕೆಲಸ ಮಾಡುತ್ತೇವೆ. ಈ ಬಾರಿ ಒಬ್ಬರಿಗೆ ಎಂಎಲ್ಎ ಟಿಕೆಟ್, ಇನ್ನೊಬ್ಬರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ನನ್ನದೇನು ಡಿಮ್ಯಾಂಡ್ ಇಲ್ಲ. ಟಿಕೆಟ್ ವಿಚಾರ ಅಧ್ಯಕ್ಷರಿಗೆ ಬಿಟ್ಟಿದ್ದು ಎಂದಿದ್ದಾರೆ.