Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿಗೆ ಕಿರ್ಲೋಸ್ಕರ್ ಸಂಸ್ಥೆಯಿಂದ 3000 ಕೋಟಿ ಹೂಡಿಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 04 : ಹಿರಿಯೂರು ಜನತೆಗೆ ಕಿರ್ಲೋಸ್ಕರ್ ಸಂಸ್ಥೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಹಿರಿಯೂರು ಸ್ಥಾವರ ಅಭಿವೃದ್ಧಿಗೆ ಹೂಡಿಕೆ ಮಾಡಲು ಬರೋಬ್ಬರಿ 3000 ಕೋಟಿ ಹೂಡಿಕೆ ಮಾಡುವ ಮೂಲಕ, ಹಿರಿಯೂರಿನ ಜನತೆಯ ಸಂತಸಕ್ಕೆ ಕಾರಣವಾಗಿದೆ. ಈ ಮೂಲಕ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಸಿಗಲಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಂಬಿ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿಸ್ ಪ್ರಮುಖರೊಂದಿಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಸಂಸ್ಥೆಯು ಮುಂದಿನ 3 ವರ್ಷಗಳಲ್ಲಿ ಉಕ್ಕು ತಯಾರಿಕೆಯನ್ನು ವಿಸ್ತರಿಸಲು, ಕಬ್ಬಿಣದ ಅದಿರು ಸಂಸ್ಕರಣೆಯನ್ನು ಹೆಚ್ಚಿಸಲು ಮತ್ತು ಸ್ಪಾಂಜ್ ಪೈಪ್ ಉತ್ಪಾದನೆಗಾಗಿ ಹಿರಿಯೂರು ಸ್ಥಾವರವನ್ನು ಅಭಿವೃದ್ಧಿಪಡಿಸಲು ₹3,000 ಕೋಟಿ ಹೂಡಿಕೆ ಮಾಡಲಿದೆ‌ ಎಂದು ಹೇಳಿದ್ದಾರೆ.

ಜೊತೆಗೆ ಕಿರ್ಲೊಸ್ಕರ್ ಸಂಸ್ಥೆಯಿಂದ ಶೇ. 99% ಕನ್ನಡಿಗರಿಗೆ ಉದ್ಯೋಗ ನೀಡುವ ಭರವಸೆಯನ್ನೂ ನೀಡಿದೆ. ಕಳೆದ ಎರಡು ದಶಕಗಳಿಂದ ತನ್ನ ಲಾಭದ ಶೇ. 2ರಷ್ಟು ಅಂಶವನ್ನು ಸಿಎಸ್ಆರ್ ಚಟುವಟಿಕೆಗಳಿಗೆ ಮೀಸಲಿಟ್ಟಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಆರೋಗ್ಯ ಮತ್ತು ಜನಕಲ್ಯಾಣದ ಕ್ಷೇತ್ರದಲ್ಲಿ ಹೆಚ್ಚಿನ ಒತ್ತು ನೀಡಲಿರುವುದು ಶ್ಲಾಘನೀಯ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...