ಬೆಂಗಳೂರು: ಕೇಂದ್ರ ಸರಕಾರವು ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ರೂಪಾಯಿಯನ್ನು ರೈತರಿಗೆ ನೀಡಿದರೆ, ರಾಜ್ಯ ಸರಕಾರವು ಅದಕ್ಕೆ ಪೂರಕವಾಗಿ 4 ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡಿದೆ. ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರಿಗೆ ಕೇಂದ್ರದಿಂದ 7,103 ಕೋಟಿ ಮತ್ತು ರಾಜ್ಯದಿಂದ 2,849 ಕೋಟಿ ರೂಪಾಯಿ ವಿತರಣೆಯಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ 97ರಷ್ಟು ರೈತರ ಖಾತೆಗಳು ಆಧಾರ್ ಲಿಂಕ್ ಆಗಿದ್ದು, ನೇರ ವರ್ಗಾವಣೆ ಸಾಧ್ಯವಾಗಿದೆ. ಈ ಚಟುವಟಿಕೆಗೆ 2020- 21ನೇ ಸಾಲಿನಲ್ಲಿ ಕರ್ನಾಟಕಕ್ಕೆ ಮೊದಲನೇ ರಾಜ್ಯ ಪ್ರಶಸ್ತಿ ಲಭಿಸಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಶೇಕಡಾ 1.5 ರಷ್ಟು ಮಾರುಕಟ್ಟೆ ಶುಲ್ಕ ವಿಧಿಸುತ್ತಿದ್ದವು. ಅದನ್ನು ಶೇಕಡಾ 0.60ಗೆ ಇಳಿಸಲಾಗಿದೆ. 2020ರ ಜನವರಿ 31ಕ್ಕೆ ಇದ್ದ ಮಧ್ಯಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಗಳ ಬಡ್ಡಿಯನ್ನು ಮನ್ನಾ ಮಾಡಲಾಗಿದೆ. ಇದರಿಂದ 55,546 ರೈತರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ಜಲ ಸಂಪನ್ಮೂಲ ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ಭಾರಿ ಮತ್ತು ಮಧ್ಯಮ ನೀರಾವರಿಗೆ ರಾಜ್ಯದಲ್ಲಿ 33,465 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಇದರಿಂದ 61,147 ಹೆಕ್ಟೇರ್ ಹೆಚ್ಚು ಜಮೀನು ನೀರಾವರಿಗೆ ಒಳಪಟ್ಟಿದೆ. ಸಣ್ಣ ನೀರಾವರಿ ಇಲಾಖೆಯಲ್ಲಿ 1201.52 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ 14 ಜಿಲ್ಲೆಗಳ 41 ತಾಲ್ಲೂಕುಗಳ 1,199 ಗ್ರಾಮ ಪಂಚಾಯತ್ಗಲಳಲ್ಲಿ 39,703 ಚದರ ಕಿಮೀ ಪ್ರದೇಶದಲ್ಲಿ ನೀರಾವರಿ ಯೋಜನೆ ಕಾರ್ಯಾನುಷ್ಠಾನ ಮಾಡಲಾಗಿದೆ ಎಂದು ವಿವರಿಸಿದರು.
ಕೋವಿಡ್ ಬಂದು ಶಾಲಾ ಕಾಲೇಜು ಬಂದ್ ಆಗಿದ್ದರೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆ ಮತ್ತು ಇತರ ಸೇವಾ ಸೌಲಭ್ಯಕ್ಕೆ ಸಂಬಂಧಿಸಿ ಶಿಕ್ಷಕ ಮಿತ್ರ ಆ್ಯಪ್ ಅಭಿವೃದ್ಧಿ ಪಡಿಸಿದ್ದು, ಶಿಕ್ಷಕರ ಕಚೇರಿ ಅಲೆದಾಟ ತಪ್ಪಿಸಲಾಗಿದೆ. 100 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ತಲಾ 2 ಕೋಟಿಯಂತೆ 200 ಕೋಟಿ ರೂಪಾಯಿ ಅನುದಾನ ಕೊಟ್ಟಿದ್ದೇವೆ ಎಂದರು. ಎಲ್ಲ ಸಮಸ್ಯೆಗಳ ನಡುವೆ ಎಸ್ಎಗಸ್ಎ2ಲ್ಸಿಂ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು