Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಿತ್ತೂರು ರಾಣಿ ಚೆನ್ನಮ್ಮರ ಸ್ವಾತಂತ್ರ್ಯ ಹೋರಾಟ ಅವಿಸ್ಮರಣೀಯ : ಶಾಸಕ ರಘುಮೂರ್ತಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 23 : ಕಿತ್ತೂರು ರಾಣಿ ಚೆನ್ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ್ರಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿದ್ದು ತನ್ನ ವೀರತ್ವದಿಂದಲೇ ಬ್ರಿಟಿಷರ ವಿರುದ್ಧ ಹೋರಾಡಿ  ಮಹಿಳೆಯರು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂದು ಸಾಧಿಸಿ ತೋರಿಸಿದ ದಿಟ್ಟ ಮಹಿಳೆ ಎಂದು ಶಾಸಕ ಟಿ ರಘುಮೂರ್ತಿ ಅಭಿಪ್ರಾಯಪಟ್ಟರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಆಯೋಜಿಸಿದ್ದ 247ನೇ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚನ್ನಮ್ಮನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಜೀವವನ್ನು ಬಲಿ ನೀಡಿದ್ದಾರೆ.
ಮಹಿಳೆಯರು ಹೊರಬರಲು ಅಂಜುತ್ತಿದ್ದ ಅಂದಿನ ಕಾಲದಲ್ಲಿಯೇ ರಾಣಿ ಚೆನ್ನಮ್ಮ ತನ್ನ ಧೈರ್ಯ ಸಾಹಸದ ಮೂಲಕ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕೆಚ್ಚೆದೆಯಿಂದ ಮುನ್ನುಗ್ಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ತನ್ನ ಪ್ರಾಣವನ್ನು ಲೆಕ್ಕಿಸದೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಇಂದಿಗೂ ಸಹ ಚಿರಸ್ಥಾಯಿಯಾಗಿ ಉಳಿದಿದ್ದಾರೆ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಸರ್ಕಾರಗಳು ಮೀಸಲಾತಿಯನ್ನು ನೀಡಿದ್ದು ಶೈಕ್ಷಣಿಕವಾಗಿ ರಾಜಕೀಯವಾಗಿ ಸಾಮಾಜಿಕವಾಗಿ ಮುಂದೆ ಬರಲು ಇಂತಹ ದಿಟ್ಟ ಮಹಿಳೆಯ ಆದರ್ಶಗಳನ್ನು ಇಂದಿನ ಯುವತಿಯರು ಹಾಗೂ ಮಹಿಳೆಯರು ಆದರ್ಶವಾಗಿಟ್ಟುಕೊಂಡು ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಶಶಿಧರ್ ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹೋರಾಟವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಬ್ರಿಟಿಷರ ಬೆದರಿಕೆಗೆ ಎದೆಗುಂದದೆ ತನ್ನ ದಿಟ್ಟತನದ ಮೂಲಕ ಹೋರಾಟ ನಡೆಸಿ ಕಿತ್ತೂರು ಸಂಸ್ಥಾನವನ್ನು ಸಂರಕ್ಷಿಸಿದರಲ್ಲದೆ ಸಂಗೊಳ್ಳಿ ರಾಯಣ್ಣನಂತಹ ಹೋರಾಟಗಾರರನ್ನು ಹುರಿದುಂಬಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಿದ ಕೀರ್ತಿ ರಾಣಿ ಚೆನ್ನಮ್ಮರಿಗೆ ಸಲ್ಲುತ್ತದೆ ಎಂದು ತಿಳಿಸಿದರು‌.

ಈ ಸಂದರ್ಭದಲ್ಲಿ ತಹಶಿಲ್ದಾರ್ ರೆಹಾನ್ ಪಾಷಾ ಇಓ ಶಶಿಧರ್ ಡಿವೈಎಸ್ಪಿ ಸತ್ಯನಾರಾಯಣರಾವ್ ನಗರಸಭೆ ಅಧ್ಯಕ್ಷೆ ಶಿಲ್ಪ ಉಪಾಧ್ಯಕ್ಷೆ ಕವಿತಾ ಸದಸ್ಯರಾದ ಕವಿತಾ ಸುಮಾ ಭರಮಯ್ಯ ಮಲ್ಲಿಕಾರ್ಜುನ ರಮೇಶ್ ಗೌಡ ಎಂ ಜಿ ರಾಘವೇಂದ್ರ ಪೌರಾಯುಕ್ತ ಜಗರೆಡ್ಡಿ ಕಿತ್ತೂರು ರಾಣಿ ಚೆನ್ನಮ್ಮ ಸಂಘದ ಅಧ್ಯಕ್ಷೆ ಮಂಜುಳಾ ಕೆಟಿ ಶಿವಕುಮಾರ್ ಹೊಸಮನೆ ಮಂಜಣ್ಣ ಕಿರಣ್ ಉಮಾಪತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now