ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ದಾವಣಗೆರೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆ ಎನ್ ರಾಜಣ್ಣ ಗೆಲುವು ಸಾಧಿಸಿ, ಕಾಂಗ್ರೆಸ್ ಸರ್ಕಾರದಲ್ಲಿ ಸಹಕಾರಿ ಸಚಿವರಾಗಿ ಮುಂದುವರೆದಿದ್ದಾರೆ. ಆದರೆ ಇಂದು ನಟ ಕಿಚ್ಚ ಸುದೀಪ್ ಅವರ ಬಗ್ಗೆ ಬೇಸರ ಮಾಡಿಕೊಂಡು ಮಾತನಾಡಿದ್ದಲ್ಲದೆ, ಕಿವಿ ಮಾತನ್ನು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಿಚ್ಚ ಸುದೀಪ್ ಅವರು ನಮ್ಮ ವಿರುದ್ಧವೇ ಕ್ಯಾಂಪೇನ್ ಮಾಡಿದ್ದು, ಬೇಸರವಾಗಿದೆ. ಇನ್ನು ಮುಂದಾದರೂ ಅರಿತುಕೊಂಡು ಮುಂದುವರೆಯಲಿ. ಸಾಮಾನ್ಯ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿದ್ದರೆ ಏನು ಅನ್ನಿಸುತ್ತಿರಲಿಲ್ಲ. ಆದರೆ ಎಸ್ ಟಿ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿದ್ದಾರೆ. ಅದು ನೋವು ತಂದಿದೆ.
ನಮ್ಮವರು ಎರಡು ಕಡೆ ಸ್ಪರ್ಧಿಸಿದಾಗ ಒಬ್ಬರ ಪರವಾಗಿ, ಇನ್ನೊಬ್ಬರ ವಿರುದ್ಧವಾಗಿ ಪ್ರಚಾರ ಮಾಡಿದ್ದಾರೆ. ಇದು ನಮಗೆಲ್ಲಾ ಬೇಸರ ತಂದಿದೆ. ಇದು ಪ್ರತಿಭಾನ್ವಿತ ನಟನ ಭವಿಷ್ಯಕ್ಕೆ ಕುತ್ತು ತರುತ್ತದೆ. ಆತನಿಗೆ ಅನುಭವ ಕಡಿಮೆಯಿದೆ. ಶ್ರೇಷ್ಠ ನಟನಾಗಲು ಅವಕಾಶವಿದೆ. ಅದನ್ನು ಅರಿತುಕೊಂಡಯ ಮುಂದುವರೆಯಲಿ. ಇನ್ನಾದರೂ ಅರಿತುಕೊಂಡು ಮುಂದುವರೆಯಲಿ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್