Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಅಪಾರ್ಥ ಕಲ್ಪಿಸುವುದು ಬೇಡ : ಕೆ ಎನ್ ರಾಜಣ್ಣ

Facebook
Twitter
Telegram
WhatsApp

 

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆ ಸಿದ್ದರಾಮಯ್ಯ ಅವರ ಅಮೃತಮಹೋತ್ಸವ ಮಾಡಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಅಮೃತಮೋಹತ್ಸವ ಅಧ್ಯಕ್ಷತೆ ವಹಿಸಿಕೊಂಡಿರುವ ಕೆ ಎನ್ ರಾಜಣ್ಣ ಮಾತನಾಡಿ, ಸಿದ್ದರಾಮಯ್ಯ ಈ ಆಚರಣೆ ಅವಶ್ಯಕತೆ ಇಲ್ಲ ಅಂದಿದ್ರು. ನಾವೆಲ್ಲ ಅವರ ಮನವೊಲಿಸಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ರಾಹುಲ್ ಗಾಂಧಿ ಕೂಡ ಈ ಕಾರ್ಯಕ್ರಮಕ್ಕೆ ಬರ್ತಾರೆ ಎಂದಿದ್ದಾರೆ.

ಸಿದ್ದರಾಮಯ್ಯ ನಡೆದು ಬಂದ ಹಾದಿ ಹೊಸ ಪೀಳಿಗೆಗೆ ತಿಳಿಸಬೇಕು. ಅವರ ಕಷ್ಟದ ಹಾದಿ ಜನರಿಗೆ ತಿಳಿಯಬೇಕು. ಸಿದ್ದರಾಮಯ್ಯ ಕೊಟ್ಟ ಕಾರ್ಯಕ್ರಮಕ್ಕೆ ಒಂದೊಂದು ಕಾರಣ ಇದ್ದಾವೆ. ಸಿದ್ದರಾಮಯ್ಯ ಅನುಭವಿಸಿದ ಕಷ್ಟವನ್ನು ಯೋಜನೆ ರೂಪದಲ್ಲಿ ತಂದ್ರು. ಈ ಕಾರ್ಯಕ್ರಮದ ಬಗ್ಗೆ ಅನ್ಯತಾ ಭಾವಿಸಬಾರದು. ಪಕ್ಷದ ಒಳಗೆ ನಡೆಯುತ್ತಿರುವ ಕಾರ್ಯಕ್ರಮ ಇದು. ಅಪಾರ್ಥ ಕಲ್ಪಿಸುವುದು ಬೇಡ ಎಂದು ಕೆ ಎನ್ ರಾಜಣ್ಣ ಮನವಿ ಮಾಡಿದ್ದಾರೆ.

ಇದೆ ವೇಳೆ ಮಾಜಿ ಸಚಿವ ಪಿ ಜಿ ಆರ್ ಸಿಂಧ್ಯಾ ಮಾತನಾಡಿ, ಸಿದ್ದರಾಮಯ್ಯ ಈ ರಾಷ್ಟ್ರದ ಒಂದು ವಿಶೇಷ ವ್ಯಕ್ತಿ. ನಿಜಲಿಂಗಪ್ಪ, ದೇವರಾಜ್ ಅರಸು ಈ ನಾಡಿನಿಂದ ರಾಷ್ಟ್ರಕ್ಕೆ ಪರಿಚಯ ಆಗಿದ್ರು. ಈ ನಾಯಕರ ಒಡನಾಟ ಕೂಡ ಸಿದ್ದರಾಮಯ್ಯರಿಗೆ ಇತ್ತು. ಜೆಪಿ ಚಳುವಳಿ ಮೂಲಕ ಸಿದ್ದರಾಮಯ್ಯ ಹೋರಾಟ ಆರಂಭಿಸಿದ್ರು. ಹಲವು ಏಳು‌ಬೀಳು ಸಿದ್ದರಾಮಯ್ಯ ನೋಡಿದ್ದಾರೆ. ಸಮಗ್ರ ದೃಷ್ಟಿಕೋನ ಇಟ್ಟುಕೊಂಡ ನಾಯಕರು ಕಡಿಮೆ. ಸಿದ್ದರಾಮಯ್ಯ ಸಮಗ್ರ ದೃಷ್ಟಿಕೋನ ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ ಎಂದಿದ್ದಾರೆ.

ಬಿ ಎಲ್ ಶಂಕರ್ ಹೇಳಿಕೆ ನೀಡಿದ್ದು, ಕಾಂಗ್ರೆಸ್ಸಿಗರು ಮಾಡುವ ಕಾರ್ಯಕ್ರಮ ಇದಾದ್ರು, ಕಾಂಗ್ರೆಸ್ ಪಕ್ಷದ ಅಡಿಯಲ್ಲಿ ಕಾರ್ಯಕ್ರಮ ನಡೆಯಲ್ಲ. ಸಮಿತಿಯಿಂದ ಈ ಕಾರ್ಯಕ್ರಮ ಆಯೋಜನೆ ಆಗಿದೆ. ಸಿದ್ದರಾಮೋತ್ಸವ ಅಂತ ನಾವು ಹೆಸರು ಕೊಟ್ಟಿಲ್ಲ. ಮಾಧ್ಯಮದವರು ಈ ಹೆಸರು‌ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಹೆಸರಲ್ಲಿ ಕಾರ್ಯಕ್ರಮ ನೆಪ ಅಷ್ಟೇ. ಅವರ ರಾಜೀನಾಮೆ ಬದುಕನ್ನು ‌ಮೆಲಕು ಹಾಕುವ ‌ಕಾರ್ಯಕ್ರಮ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!