ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಇಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿ ಮಾಡಿರುವುದು ರಾಜಣ್ಣ ಅವರ ರಾಜೀನಾಮೆ ವಿಚಾರ. ಆದರೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದ್ದು, ರಾಜಣ್ ಅವರು ರಾಜೀನಾಮೆ ಕೊಟ್ಟಿದ್ದಲ್ಲ, ಬದಲಿಗೆ ಸಿದ್ದರಾಮಯ್ಯ ಅವರೇ ಸಂಪುಟದಿಂದ ಕಿಕ್ ಔಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೈಕಮಾಂಡ್ ಮಾತಿಗೆ ಬೆಲೆ ಕೊಟ್ಟು ರಾಜೀನಾಮೆ ನೀಡಿದ್ದಾರೆ ಅಂತಾನೆ ಅಂದುಕೊಂಡಿದ್ದರು. ಆದರೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ರಾಜಣ್ಣ ಅವರ ಸಂಪುಟದಿಂಸ ವಜಾ ಮಾಡುವಂತೆ ಕೋರಿ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಇದೀಗ ರಾಜ್ಯಪಾಲರು ವಜಾ ಮಾಡಿ ಸರ್ಕಸರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ರವಾನೆ ಮಾಡಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭುಶಂಕರ್ ಅವರಿಂದ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ರವಾನಿಸಿದ್ದಾರೆ. ಆ ಪತ್ರದಲ್ಲಿ ಈ ಕ್ಷಣದಿಂದಾನೆ ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದು, ಹೋರಾಟ ನಡೆಸುತ್ತಿರುವ ಮತಗಳ್ಳತನದ ಬಗ್ಗೆ ರಾಜಣ್ಣ ಮಾತನಾಡಿದ್ದರು. ಮತಗಳ್ಳತನವಾಗಿರುವುದು ನಿಜ. ಆದರೆ ಅದರಲ್ಲಿ ನಮ್ಮದು ತಪ್ಪಿದೆ. ನಮ್ಮದೆ ಸರ್ಕಾರವಿದ್ದಾಗ ಅದನ್ನ ಪರಿಶೀಲನೆ ಮಾಡಬೇಕಿತ್ತು ಎಂದು ಹೇಳಿದ್ದರು. ಆ ಹೇಳಿಕೆಗೆ ಸಂಬಂಧಿಸಿದಂತೆ ಹೈಕಮಾಂಡ್ ಈ ನಿರ್ಧಾತ ತೆಗೆದುಕೊಂಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಇದೀಗ ರಾಜಣ್ಣ ಅವರು ಸಚಿವ ಸ್ಥಾನದಿಂದ ಕಿಕ್ ಔಟ್ ಆಗಿದ್ದಾರೆ. ಈ ಸಂಬಂಧ ಇನ್ನು ರಾಜಣ್ಣ ಅವರು ಪ್ರತಿಕ್ರಿಯೆ ನೀಡಿಲ್ಲ. ಪ್ರತಿಕ್ರಿಯೆಗಾಗಿ ಎಲ್ಲರು ಕಾಯ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್