Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಮುಂದಿನ ಸಿಎಂ ಬಗ್ಗೆ ಕೋಡಿಶ್ರೀ ಭವಿಷ್ಯ ; ಏನಂದ್ರು ಸ್ವಾಮೀಜಿ..?

---Advertisement---

ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಸಾಕಷ್ಟು ಕುತೂಹಲವಂತೂ ಇದ್ದೇ ಇರುತ್ತದೆ. ರಾಜ್ಯ ಮಳೆ, ಬೆಳೆ, ರಾಜಕಾರಣದ ಬಗ್ಗೆ ಭವಿಷ್ಯ ನುಡಿದು ಗಮನ ಸೆಳೆಯುತ್ತಾರೆ. ಇದೀಗ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಚರ್ಚೆ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ. ಇನ್ನೇನು ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಇಳಿದೇ ಬಿಡುತ್ತಾರೆ ಎಂಬೆಲ್ಲಾ ರೀತಿ ವಿಪಕ್ಷಗಳು ವಾಗ್ದಾಳಿ ನಡೆಸಿವೆ. ಆದರೆ ಆ ವಿಚಾರ ಅಲ್ಲಿಗಲ್ಲಿಗೆ ನಿಂತಿದೆ. ಇದೀಗ ಕೋಡಿಮಠದ ಸ್ವಾಮಿಗಳು ಸಿಎಂ ಸ್ಥಾಮದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ವಿಜಯಪುರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿ, ಮೊನ್ನೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡುತ್ತಿದ್ದೆ. ಉತ್ತರ ಕರ್ನಾಟಕದಿಂದ ಯಾರಾದರೂ ಸಿಎಂ ಆದರೆ ಎಂಬಿ ಪಾಟೀಲ್ ಆಗಲಿ ಎಂದೆ ಎಂದು ಹೇಳಿದರು. ಈ ಮಾತನ್ನು ಕೇಳಿಸಿಕಿಂಡ ಎಂಬಿ ಪಾಟೀಲ್ ಖುಷಿ ಪಟ್ಟರು.

ಒಂದೇ ವೇದಿಕೆಯಲ್ಲಿ ಸಚಿವ ಎಂಬಿ ಪಾಟೀಲ್ ಹಾಗೂ ಕೋಡಿಮಠದ ಶಿವಯೋಗಿ ಶಿವಾನಂದ ಸ್ವಾಮೀಜಿಗಳು ಇದ್ದರು. ಸ್ವಾಮೀಜಿಗೆ ತನ್ನ ಮೇಲೆ ಇರುವ ಆತ್ಮೀಯತೆಗೆ ಖುಷಿ ಪಟ್ಟರು. ಸಿಎಂ ಸ್ಥಾನದಲ್ಲಿ ತನ್ನನ್ನು ನೋಡಲು ಇಚ್ಛಿಸುತ್ತಿದ್ದಾರೆ ಎಂಬ ಖುಷಿ ಅವರಲ್ಲಿ ಕಂಡಿತ್ತು. ಇನ್ನು ಸಿಎಂ ವಿಚಾರಕ್ಕೇನೆ ಕಳೆದ ಬಾರಿಯೂ ಕೋಡಿ ಮಠದ ಶ್ರೀಗಳ ಭವಿಷ್ಯ ಸದ್ದು ಮಾಡಿತ್ತು. ಈ ಬಾರಿ ಮಹಿಳೆ ಸಿಎಂ ಆಗ್ತಾರೆ ಎಂಬ ಭವಿಷ್ಯ ನುಡಿದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಚರ್ಚೆಗೆ ಬಂದಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...