Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೋಲಾರ : ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಇಬ್ಬರು ಮಕ್ಕಳು ಜಲಸಮಾಧಿ!

---Advertisement---

ಸುದ್ದಿಒನ್,ಕೋಲಾರ,ಮೇ.18: ಈಜಲು ಕಲಿಯಲು ಹೋದ ತಂದೆ ಮತ್ತು ಇಬ್ಬರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಅತ್ಯಂತ ದಾರುಣ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ನಕ್ಕನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಶ್ರೀನಿವಾಸ್ (41), ಹಾಗೂ ಇವರ ಮಕ್ಕಳಾದ ಚೇತನ್ (13) ಮತ್ತು ರಾಜೇಶ್ (8) ಮೃತಪಟ್ಟ ದುರ್ದೈವಿಗಳು. ನಕ್ಕನಹಳ್ಳಿ ಗ್ರಾಮದ ಈರಪ್ಪ ಎಂಬುವವರಿಗೆ ಸೇರಿದ ಕೃಷಿ ಹೊಂಡದಲ್ಲಿ ಈ ದುರಂತ ನಡೆದಿದೆ. ತಂದೆ ಶ್ರೀನಿವಾಸ್ ಅವರು ತಮ್ಮ ಇಬ್ಬರು ಮಕ್ಕಳಿಗೆ ಈಜಲು ಕಲಿಸುವ ಉದ್ದೇಶದಿಂದ ಕೃಷಿ ಹೊಂಡಕ್ಕೆ ಕರೆದುಕೊಂಡು ಹೋಗಿದ್ದರು. ಆದರೆ, ನೀರಿನ ಆಳ ತಿಳಿಯದ ಹಿನ್ನೆಲೆಯಲ್ಲಿ ಈಜುವ ವೇಳೆ ನಿಯಂತ್ರಣ ತಪ್ಪಿ ಮೂವರೂ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಒಂದೇ ಬಾರಿಗೆ ಪತಿ ಹಾಗೂ ಇಬ್ಬರು ಮುದ್ದಿನ ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now