ಚಿತ್ರದುರ್ಗ. ಸೆ.27: ಚಿತ್ರದುರ್ಗ ತಾಲ್ಲೂಕು ಮಲ್ಲಾಪುರ ಗ್ರಾಮದಲ್ಲಿ ಸೆಪ್ಟೆಂಬರ್ 28ರಂದು ಸಂಜೆ 5ಕ್ಕೆ ಶ್ರೀ ಆದಿಶಕ್ತಿ ಕೊಲ್ಲಾಪುರ ಮಹಾಲಕ್ಷ್ಮಿ ಅಮ್ಮನವರ ದೇವಾಲಯ ಲೋಕಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರಪೀಠದ ಡಾ.ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ದೇವಾಲಯ ಲೋಕಾರ್ಪಣೆ ಮಾಡುವರು. ಸಂಸದ ಗೋವಿಂದ ಎಂ.ಕಾರಜೋಳ ಅಧ್ಯಕ್ಷತೆ ವಹಿಸುವರು. ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತಂಗಿ ಭಾವಚಿತ್ರದ ಅನಾವರಣ ಮಾಡುವರು. ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಶ್ರೀ ಮಹಾಲಕ್ಷ್ಮಿ ಭಾವಚಿತ್ರದ ಅನಾವರಣ ಮಾಡುವರು. ವಿಶೇಷ ಆಹ್ವಾನಿತರಾಗಿ ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜಿ.ಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್,
ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ.ರಘು,
ರಾಜ್ಯ ಕಾಂಗ್ರೆಸ್ ಮುಖಂಡ ಬಿ.ಸೋಮಶೇಖರ್, ಮಾದಾರ ಚೆನ್ನಯ್ಯ ಸೇವಾ ಸಮಿತಿ ರಾಜ್ಯಾಧ್ಯಕ್ಷ ಹೂಡಿ ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ರಾಜ್ಯ ಬಿಜೆಪಿ ಮುಖಂಡ ಉಮೇಶ ಕಾರಜೋಳ, ಕಾಂಗ್ರೆಸ್ ಮುಖಂಡ ಡಾ.ಬಿ.ತಿಪ್ಪೇಸ್ವಾಮಿ, ಲಿಡ್ಕರ್ ಮಾಜಿ ಅಧ್ಯಕ್ಷ ಹಳಿಯೂರು ಓ.ಶಂಕರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನರಸಿಂಹರಾಜು, ದಿಶಾ ಸಮಿತಿ ಸದಸ್ಯ ಎಲ್.ಭರತ್, ನಗರಸಭೆ ಮಾಜಿ ಅಧ್ಯಕ್ಷರಾದ ಹೆಚ್.ಜೆ.ಕೃಷ್ಣಮೂರ್ತಿ, ಹೆಚ್.ಮಂಜಪ್ಪ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸುವರು.
ಒಳ ಮೀಸಲಾತಿಗೆ ಶ್ರಮಿಸಿ ಹೋರಾಟ ಮಾಡಿದ ಡಾ.ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು, ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹೆಚ್.ಹನುಮಂತಪ್ಪ, ಜಿ.ಪಂ ಮಾಜಿ ಅಧ್ಯಕ್ಷರಾದ ಬಿ.ಪಿ.ಪ್ರಕಾಶಮೂರ್ತಿ, ಹುಲ್ಲೂರು ಕುಮಾರಸ್ವಾಮಿ ಹಾಗೂ ವೈದ್ಯಕೀಯ ಸೇವೆ ಸಲ್ಲಿಸಿದ ಡಾ.ಇ.ಸತೀಶ್ ಅವರಿಗೆ ಸನ್ಮಾನ ಮಾಡಲಾಗುವುದು ಎಂದು ಮಲ್ಲಾಪುರ ಗ್ರಾಮಸ್ಥರು ಹಾಗೂ ಶ್ರೀ ಮಾದಾರ ಚನ್ನಯ್ಯ ನೌಕರರ ಸೇವಾ ಸಮಿತಿ ಪ್ರಕಟಣೆ ತಿಳಿಸಿದೆ.






