Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ : ಪರಿಶೀಲಿಸಿ ಸೂಕ್ತ ತೀರ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ವಿಜಯನಗರ(ಹೊಸಪೇಟೆ), ಮೇ 16: ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಕೆಲಸವನ್ನು ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿಗಳ ಆದೇಶ ಹೊರತಾಗಿಯೂ , ಕೆಲಸ ಮುಂದುವರೆದಿರುವ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದರು.

ಗ್ಯಾರಂಟಿಗಳಿಗೆ ಹಣದ ಕೊರತೆಯಿಲ್ಲ ;

ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ ಎಂದರು.

ಹೊಸಪೇಟೆಯಲ್ಲಿ ಎರಡು ವರ್ಷದ ಸಾಧನಾ ಸಮಾವೇಶ ;

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ ಎಂದರು.

ಆಡಳಿತಾತ್ಮಕ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ರಚನೆ :

ಗ್ರೇಟರ್ ಬೆಂಗಳೂರು ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಟೀಕಿಸುತ್ತಿರುವ ಬಗ್ಗೆ ಉತ್ತರಿಸಿ, ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ವಿಭಾಗಗಳನ್ನು ರಚಿಸಬೇಕೆಂದು ಅಂದಿನ ಬಿಜೆಪಿಯ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ರವರು ಯೋಜಿಸಿದ್ದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನ ನೆಲೆಸಿದ್ದು, ಈ ನಗರದ ಆಡಳಿತವನ್ನು ಒಂದು ಮಹಾನಗರ ಪಾಲಿಕೆ ನಿರ್ವಹಿಸುವುದು ಕಷ್ಟಸಾಧ್ಯ. ಆದ್ದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಹೆಚ್ಚು ಮಹಾನಗರಪಾಲಿಕೆಗಳನ್ನು ರಚಿಸಬೇಕೆಂಬ ಚಿಂತನೆಯಿಂದ ನನ್ನ ಹಿಂದಿನ ಮುಖ್ಯಮಂತ್ರಿಯ ಅವಧಿಯಲ್ಲಿ ಬಿ.ಎಸ್.ಪಾಟೀಲ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಆದ್ದರಿಂದ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ, ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದರು.

ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ :

ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅನರ್ಹತೆಯ ಕುರಿತ ಪ್ರಶ್ನೆಗೆ ಉತ್ತರಿಸಿ, ನ್ಯಾಯಾಲಯ ಅವರಿಗೆ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ. ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ ಎಂದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು :

2008-2013ರವರೆಗೆ ವಿರೋಧಪಕ್ಷದ ನಾಯಕನಾಗಿ , ಲೋಕಾಯುಕ್ತ ಸಂತೋಷ್ ಹೆಗಡೆ ಅವರ ಅಕ್ರಮ ಗಣಿಗಾರಿಕೆಯ ವರದಿ ಆಧರಿಸಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಅಂದು ಬಿಜೆಪಿಸರ್ಕಾರದ ಅದನ್ನು ವಿರೋಧಿಸಿತ್ತು. ಅಂದು ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ ಹೋರಾಟಕ್ಕೆ ಇಂದು ಫಲ ದೊರೆತಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು ಹಾಗೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ತಿಳಿಸಿದರು.

ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ಸದಾ ವಿರೋಧಿಸಿದ್ದೇನೆ :

ಸಿದ್ದರಾಮಯ್ಯನವರು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದರು ಎಂದು ಜನಾರ್ಧನ ರೆಡ್ಡಿಯವರ ಹೇಳಿಕೆಯ ಬಗ್ಗೆ ಪ್ರತಿಕ್ರಯಿಸಿ, ಅವರ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಎಂದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...