ಬೆಂಗಳೂರು: ಕರಾವಳಿ ಜಿಲ್ಲೆಗಳಿಗೆ ಕುಚ್ಚವಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಸಂಬಂಧ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ವಿಶೇಷ ಸಭೆ ನಡೆಸಲಾಗಿದೆ.
ಕರಾವಳಿ ಜಿಲ್ಲೆಗಳಿಗೆ ಅಗತ್ಯವಿರುವ ವರ್ಷಕ್ಕೆ 12ಲಕ್ಷ ಕ್ವಿಂಟಾಲ್ ಕುಚ್ಚಲಕ್ಕಿ ವಿತರಣೆ ಮಾಡಲು, ಇದಕ್ಕಾಗಿ ವರ್ಷಕ್ಕೆ ಕನಿಷ್ಠ 18 ಲಕ್ಷ ಕ್ವಿಂಟಾಲ್ ಭತ್ತದ ಅಗತ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಗಳಲ್ಲಿ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆ ಮಾಡುತ್ತಿದೆ. ಇನ್ನುಳಿದ ಭತ್ತವನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಗೆ ಕ್ರಮ ತೆಗೆದುಕೊಳ್ಳಬೇಕು.
ಕೇರಳ ಮತ್ತು ತೆಲಂಗಾಣ ರಾಜ್ಯಗಳಿಂದ ಭತ್ತ ಪೂರೈಸಿಕೊಳ್ಳಲು ಚಿಂತನೆ ನಡೆಸಲಾಗುತ್ತಿದೆ. ಈ ಸಂಬಂಧ ಈ ವಾರಾಂತ್ಯದಲ್ಲಿ ಅಧ್ಯಯನ ತಂಡ ತೆಲಂಗಾಣಕ್ಕೆ ಭೇಟಿ ನೀಡುತ್ತದೆ. ಈಗಾಗಲೇ ಒಂದು ಅಧ್ಯಯನ ತಂಡ ಕೇರಳಕ್ಕೆ ಭೇಟಿ ನೀಡಿದೆ. ಅಧ್ಯಯನ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ನಿಯೋಗದೊಂದಿಗೆ ಸಿಎಂ ಭೇಟಿಗೆ ನಿರ್ಧಾರ ಮಾಡಿದೆ. ಸಭೆಯಲ್ಲಿ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತೆ ಕನಗವಲ್ಲಿ, ಜಂಟಿ ನಿರ್ದೇಶಕ ವಿಜಯಕುಮಾರ್, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಅಹಾರ ನಿಗಮದ ಎಂಡಿ ಬಸವರಾಜ ಸೋಮಣ್ಣನವರ ಭಾಗಿಯಾಗಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…