ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಸೂಚನೆ ಮೇರೆಗೆ ಕರ್ನಾಟಕ ವಿಧಾನಪರಿಷತ್ ಗೆ, ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ವಿಪಕ್ಷ ನಾಯಕನಾಗಿ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಎನ್ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ. ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ ಮಾಡಲಾಗಿದೆ.

ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರು, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು ಮತ್ತು ಕೆಲವು ಮೋರ್ಚಾಗಳಿಗೆ ನೇಮಕಾತಿಯನ್ನು ಪ್ರಕಟಿಸಿದ್ದರು. ಇದೀಗ ಎರಡನೇ ಹಂತದಲ್ಲಿ ವಿಧಾನ ಸಭೆ ಮತ್ತು ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















