ಚಿತ್ರದುರ್ಗ(ಅ.28) : ನಗರದ ಎಸ್ ಆರ್ ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ “ಕೋಟಿ ಕಂಠ ಗಾಯನ“ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.
ಎಸ್ ಆರ್ ಎಸ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ್ ಈ, ಇವರು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಗಾಯನದ ಮೂಲಕ ನಮ್ಮ ರಾಜ್ಯದ ಇತಿಹಾಸ, ಸಂಸ್ಕೃತಿ ಹಾಗೂ ಮಹನೀಯರ ಸಾಧನೆಗಳನ್ನು ನೆನಪಿಗೆ ತರವಂತಹದು. ಕನ್ನಡವನ್ನು ಉಳಿಸುವ ಗೌರವಿಸುವ ಪ್ರಯತ್ನ ನಮ್ಮದಾಗಬೇಕು. ಕನ್ನಡ ನಾಡಿಗೆ ಕೊಡುಗೆ ನೀಡಿರುವ ಸಾಹಿತಿಗಳು, ಕವಿಗಳನ್ನು ಸ್ಮರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ನುಡಿದರು.
ಜಿಲ್ಲಾಡಳಿತದ ಪರವಾಗಿ ಸಂಪನ್ಮೂಲ ಅಧಿಕಾರಿಯಾಗಿ ಆಗಮಿಸಿದ್ದ ಕಾಲ್ಕೆರೆ ಚಂದ್ರಪ್ಪ ಟಿ. ಇವರು ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ನಂತರ 1200 ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರುಗಳಿಂದ ಗೀತಗಾಯನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ.ರವಿ ಟಿ.ಎಸ್., ಎಸ್ ಆರ್ ಎಸ್ ಹೆರಿಟೇಜ್ ಶಾಲೆ ಪ್ರಾಂಶುಪಾಲರಾದ ಶ್ರೀ ಪ್ರಭಾಕರ್, ಎಸ್ ಆರ್ ಎಸ್ ಬಿ.ಇಡಿ., ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರಾದ ಶ್ರೀ ಹನುಮಂತಪ್ಪ ಹಾಗೂ ಎಲ್ಲಾ ವಿಭಾಗಗಳ ಉಪನ್ಯಾಸಕರುಗಳು ಉಪಸ್ಥಿತರಿದ್ದರು.
ಉಪ ಪ್ರಾಂಶುಪಾಲರಾದ ಅಣ್ಣಪ್ಪ ಹೆಚ್, ಸ್ವಾಗತಿಸಿದರು. ಇಂಗ್ಲೀಷ್ ಉಪನ್ಯಾಸಕ ನಟರಾಜ್ ಎಂ ವಿ. ನಿರೂಪಿಸಿದರು. ಧನಂಜಯ್ ಎನ್ ಪಿ. ವಂದಿಸಿದರು. ಡಾ.ಮಹಾಂತೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.