Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್‌ ಆರ್‌ ಎಸ್‌ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದಿಂದ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮ

Facebook
Twitter
Telegram
WhatsApp

 

ಚಿತ್ರದುರ್ಗ(ಅ.28) :  ನಗರದ ಎಸ್‌ ಆರ್‌ ಎಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ  “ಕೋಟಿ ಕಂಠ ಗಾಯನ“ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.

ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ್‌ ಈ, ಇವರು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಗಾಯನದ ಮೂಲಕ ನಮ್ಮ ರಾಜ್ಯದ ಇತಿಹಾಸ, ಸಂಸ್ಕೃತಿ ಹಾಗೂ ಮಹನೀಯರ ಸಾಧನೆಗಳನ್ನು ನೆನಪಿಗೆ ತರವಂತಹದು. ಕನ್ನಡವನ್ನು ಉಳಿಸುವ ಗೌರವಿಸುವ ಪ್ರಯತ್ನ ನಮ್ಮದಾಗಬೇಕು. ಕನ್ನಡ ನಾಡಿಗೆ ಕೊಡುಗೆ ನೀಡಿರುವ ಸಾಹಿತಿಗಳು, ಕವಿಗಳನ್ನು ಸ್ಮರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ನುಡಿದರು.

ಜಿಲ್ಲಾಡಳಿತದ ಪರವಾಗಿ ಸಂಪನ್ಮೂಲ ಅಧಿಕಾರಿಯಾಗಿ ಆಗಮಿಸಿದ್ದ  ಕಾಲ್ಕೆರೆ ಚಂದ್ರಪ್ಪ ಟಿ. ಇವರು ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ನಂತರ 1200 ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರುಗಳಿಂದ  ಗೀತಗಾಯನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ.ರವಿ ಟಿ.ಎಸ್., ಎಸ್‌ ಆರ್‌ ಎಸ್‌ ಹೆರಿಟೇಜ್‌ ಶಾಲೆ ಪ್ರಾಂಶುಪಾಲರಾದ ಶ್ರೀ ಪ್ರಭಾಕರ್‌, ಎಸ್‌ ಆರ್‌ ಎಸ್‌ ಬಿ.ಇಡಿ., ಶಿಕ್ಷಣ ಮಹಾವಿದ್ಯಾಲಯದ  ಉಪನ್ಯಾಸಕರಾದ ಶ್ರೀ ಹನುಮಂತಪ್ಪ ಹಾಗೂ ಎಲ್ಲಾ ವಿಭಾಗಗಳ ಉಪನ್ಯಾಸಕರುಗಳು  ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲರಾದ ಅಣ್ಣಪ್ಪ ಹೆಚ್‌, ಸ್ವಾಗತಿಸಿದರು. ಇಂಗ್ಲೀಷ್‌ ಉಪನ್ಯಾಸಕ ನಟರಾಜ್‌ ಎಂ ವಿ.  ನಿರೂಪಿಸಿದರು. ಧನಂಜಯ್‌ ಎನ್‌ ಪಿ. ವಂದಿಸಿದರು. ಡಾ.ಮಹಾಂತೇಶ್‌ ಪ್ರತಿಜ್ಞಾ ವಿಧಿ ಬೋಧಿಸಿದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!