Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಾಲಿ ಧನಂಜಯ್ ಅವರನ್ನು ಮದುವೆಯಾಗುತ್ತಿರುವ ಡಾ. ಧನ್ಯತಾ ಅವರ ಊರು ಯಾವುದು ಗೊತ್ತಾ ?

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 04 : ಚಂದನವನದ ನಟ ಡಾಲಿ ಧನಂಜಯ್ ಅವರು ಚಿತ್ರರಂಗ ಹಾಗೂ ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ಇಲ್ಲಿಯವರೆಗೂ ಹೋದಲೆಲ್ಲ ಮದುವೆ ಯಾವಾಗ ಎಂಬ ಸರಣಿ ಪ್ರಶ್ನೆಗಳನ್ನು ಎದುರಿಸಿದ್ದ ಧನಂಜಯ್‌, ಈಗ ಅದೆಲ್ಲದಕ್ಕೂ ಫೋಟೋ ಸಮೇತ ಉತ್ತರ ನೀಡಿದ್ದಾರೆ.

ಅಂದಹಾಗೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಗೂ ಹಾಗೂ ಸಿನಿಮಾ ರಂಗಕ್ಕೂ ಅವಿನಾಭಾವ ಸಂಬಂಧವಿದೆ. ಅದು ಈಗಲೂ ಸಹ ನಂಟು ಮುಂದುವರಿದೆ.

ನಟ ಡಾಲಿ ಧನಂಜಯ್ ಅವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಅಳಿಯನಾಗುತ್ತಿದ್ದಾರೆ. ಹೌದು ಹೊಳಲ್ಕೆರೆಯ ಮಲ್ಲಾಡಿಹಳ್ಳಿಯ ಡಾ. ಧನ್ಯತಾ ಅವರೊಂದಿಗೆ ಮದುವೆಯಾಗಲಿದ್ದಾರೆ. ಡಾ. ಧನ್ಯತಾ ಅವರು ಮೈಸೂರಿನಲ್ಲಿದ್ದಾರೆ. ಮೂಲತಃ ಡಾ. ಧನ್ಯತಾ ಅವರು ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯವರು. ಇವರ ತಾತನ ಊರು ಶಿವಪುರ ಗ್ರಾಮ. ಆದರೆ ಬಹಳ ವರ್ಷಗಳಿಂದ ಮೈಸೂರಿನಲ್ಲಿದ್ದಾರೆ ಎನ್ನಲಾಗುತ್ತಿದೆ.

ಮೂಲತಃ ನಟ ಡಾಲಿ ಧನಂಜಯ್ ಅವರು ಕೂಡ ಚಿತ್ರದುರ್ಗ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಹಾಸನದ ಅರಸೀಕೆರೆಯವರು. ಚಿತ್ರದುರ್ಗ ಮತ್ತು ಹಾಸನ (ಅರಸೀಕೆರೆ) ಅಕ್ಕಪಕ್ಕದ ಜಿಲ್ಲೆಗಳಾಗಿವೆ.

ಮದುವೆಗೆ ಸಂಬಂಧಿಸಿದಂತೆ ಈಗಾಗಲೇ ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋ ಹಂಚಿಕೊಳ್ಳುವ ಮೂಲಕ ಧನಂಜಯ್ ಮದುವೆ ಸುದ್ದಿಯನ್ನು ಅಧಿಕೃತಗೊಳಿಸಿದ್ದಾರೆ.

ಡಾಲಿ ಧನಂಜಯ್ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗದ ಹೊಳಲ್ಕೆರೆ ಮೂಲದ ಧನ್ಯತಾ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಸುಂದರವಾಗಿ ಕಂಗೊಳಿಸುತ್ತಿದ್ದಾರೆ. ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ. ಮದುವೆ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಬರುವ 2025ರ ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಗಣ್ಯರು ಸೇರಿದಂತೆ ವಿವಿಧ ಕ್ಷೇತ್ರಗಳ ಸಾವಿರಾರು ಗಣ್ಯರು ಹಾಜರಾಗುವ ಸಾಧ್ಯತೆ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment