ಬೆಳಗಾವಿ: ಮಾಡಿದ ಕೆಲಸಕ್ಕೆ ಹಣ ಬಿಡುಗಡೆ ಮಾಡದೆ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ, ವಾಟ್ಸಾಪ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂತೋಷ್ ಸಾವಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥ ಈಶ್ವರಪ್ಪಗೆ ಶಿಕ್ಷೆಯಾಗಬೇಕೆಂದು ಹೋರಾಡುತ್ತಿರುವ ಕಾಂಗ್ರೆಸ್ ನಾಯಕರು ಇಂದು ಮೃತ ಸಂತೋಷ್ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.

ಬೆಳಗಾವಿ ತಾಲೂಕಿನ ಬಡಸ್ ಗ್ರಾಮಕ್ಕೆ ಡಿ ಕೆ ಶಿವಕುಮಾರ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರು ಭೇಟಿ ನೀಡಿ, ಸಂತೋಷ್ ಪತ್ನಿ ಕೈಗೆ 11 ಲಕ್ಷ ರೂಪಾಯಿ ಹಣದ ಚೆಕ್ ಅನ್ನು ಕೊಟ್ಟಿದ್ದಾರೆ. ಸಂತೋಷ್ ತಾಯಿ ಹಾಗೂ ಪತ್ನಿಗೆ ಧೈರ್ಯ ತುಂಬಿ, ಸಾಂತ್ವನ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಮಾತ್ರವಲ್ಲ, ಸಂಸದ ಪ್ರಕಾಶ್ ಹುಕ್ಕೇರಿ ಕೂಡ 5 ಲಕ್ಷ ಹಣವನ್ನು ಪರಿಹಾರವಾಗಿ ನೀಡಿದ್ದಾರೆ. ಕುಟುಂಬಸ್ಥರಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಮೃತ ಸಂತೋಷ್ ಕುಟುಂಬಕ್ಕೆ ಒಂದು ಕೋಟ ಪರಿಹಾರ ನೀಡಬೇಕು. ಜೊತೆಗೆ ಆತನ ಪತ್ನಿಗೆ ಸರ್ಕಾರಿ ಕೆಲಸವನ್ನು ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ.

