ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಿದೆ. ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಈ ಹಿಂದೆ ನೀಡಲಾಗಿದ್ದ ಜಾಮೀನಿನ ಅವಧಿಯನ್ನು ಕೋರ್ಟ್ ವಿಸ್ತರಣೆ ಮಾಡಿದೆ. ಡಿಕೆ ಶಿವಕುಮಾರ್ ಜೊತೆಗೆ ಪ್ರಕರಣದ ನಾಲ್ಕು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ದೆಹಲಿಯ ವಿಶೇಷ ನ್ಯಾಯಲಯದಿಂದ ಷರತ್ತು ಬದ್ಧ ಜಾಮೀನು ಮಂಜೂರಾಗಿದ್ದು, ತಲಾ ಒಂದೊಂದು ಲಕ್ಷ ರೂಪಾಯಿ ಶ್ಯೂರಿಟಿ ಕೇಳಲಾಗಿದೆ. ಜೊತೆಗೆ ಯಾವುದೇ ಕಾರಣಕ್ಕೂ ದೇಶ ಬಿಟ್ಟು ಹೋಗಬಾರದೆಂದು ಷರತ್ತಿನಲ್ಲಿ ತಿಳಿಸಿದೆ. ಸಾಕ್ಷಿ ನಾಶ ಮಾಡದಂತೆ ಎಚ್ಚರಿಕೆ ನೀಡಿ ಜಾಮೀನು ನೀಡಿದೆ.
ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಅವರಿಗೆ ಈಗಾಗಲೇ ಜಾಮೀನು ನೀಡಲಾಗಿತ್ತು. ಆದರೆ ಇತ್ತೀಚೆಗೆ ಜಾಮೀನಿನ ಅವಧಿ ಮುಕ್ತಾಯವಾಗಿದ್ದ ಕಾರಣ ಡಿ ಕೆ ಶಿವಕುಮಾರ್ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನಿಗೆ ಇ ಡಿ ಆಕ್ಷೇಪ ವ್ಯಕ್ತಪಡಿಸಿತ್ತು. ವಿಚಾರಣೆ ನಡೆಸಿದ ದೆಹಲಿ ಸ್ಪೆಷಲ್ ಕೋರ್ಟ್ ಜಾಮೀನು ಅವಧಿಯನ್ನು ಮುಂದುವರೆಸಿದೆ.