ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಸಿಕ್ಕಾಪಟ್ಟೆ ಆಕ್ಟೀವ್ ಆಗಿದೆ. ಕಾಂಗ್ರೆಸ್ ಕಾರ್ಯಕ್ರಮಗಳು, ಸುದ್ದಿಗೋಷ್ಟಿಗಳನ್ನು ನೀಡುತ್ತಾ, ಬಿಜೆಪಿ, ಜೆಡಿಎಸ್ ಮೇಲೆ ಸೋಷಿಯಲ್ ಮೀಡಿಯಾದಲ್ಲಿ ಗದಾಪ್ರಹಾರ ಕೂಡ ಮಾಡುತ್ತಾ ಇರುತ್ತಾರೆ. ಸಾಕಣ್ಟು ಜನ ಕೆಲಸ ಕೂಡ ಮಾಡುತ್ತಾ ಇದ್ದಾರೆ. ಇದೀಗ ಕೆಪಿಸಿಸಿ ಸೋಷಿಯಲ್ ಮೀಡಿಯಾ ವಿಭಾಗಕ್ಕೆ ಅಧ್ಯಕ್ಚರನ್ನ ಆಯ್ಕೆ ಮಾಡಲಾಗಿದೆ. ಇವರ ಹೆಸರು ಐಶ್ವರ್ಯ ಮಹದೇವ್.
ಮಾಜಿ ಶಾಸಕ ಮಂಚನಹಳ್ಳಿ ಮಹದೇವ್ ಅವರ ಮಗಳು ಈ ಐಶ್ವರ್ಯಾ. ಮಹದೇವ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರಿಗೂ ಆಪ್ತರಾಗಿರುವ ಶಾಸಕರಾಗಿದ್ದಾರೆ. ಐಶ್ವರ್ಯ ಅವರನ್ನ ಅಧ್ಯಕ್ಷರನ್ನಾಗಿ ಮಾಡಿ, ಎಐಸಿಸಿ ಆದೇಶ ಹೊರಡಿಸಿದೆ. ಐಶ್ಚರ್ಯ ಅವರ ಹುದ್ದೆ ತಕ್ಷಣದಿಂದಾನೇ ಜಾರಿಗೆ ಬರುವಂತೆ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದಾರೆ.
ಐಶ್ವರ್ಯಾ ಅವರು ಈ ಮೊದಲು ಎಐಸಿಸಿ ವಕ್ತಾರೆಯಾಗಿ ಕೆಲಸ ನಿರ್ವಣೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರದ ನಿವಾಸಿಯಾಗಿರುವ ಐಶ್ವರ್ಯಾ ಮಹದೇವ ಅವರು ಅತಿ ಕಿರಿಯ ವಯಸ್ಸಿನಲ್ಲಿಯೇ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಜತೆಗೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆಯಾಗಿದ್ದರು. ವಿದ್ಯಾರ್ಹತೆಯಲ್ಲಿ ವಕೀಲ ಪದವಿ ಪಡೆದಿದ್ದಾರೆ. ಎಐಸಿಸಿ ವಕ್ತಾರೆಯಾಗಿದ್ದ ಐಶ್ವರ್ಯ ಮಹದೇವ್ ಅವರು ಮಾಜಿ ಶಾಸಕ ಮಂಚನಹಳ್ಳಿ ಮಹಾದೇವ್ ಅವರ ಪುತ್ರಿ. 14 ವರ್ಷಗಳ ಹಿಂದೆ ಅವರು ಮೃತಪಟ್ಟಿದ್ದು, ಆ ಬಳಿಕ ಪುತ್ರಿ ಐಶ್ವರ್ಯ ಅವರು ಕ್ಷೇತ್ರ ಹಾಗೂ ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಕೆಪಿಸಿಸಿ ಸೋಷಿಯಲ್ ಮೀಡಿಯಾ ವಿಭಾಗಕ್ಕೆ ಅಧ್ಯಕ್ಷೆಯಾಗಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










