ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 23 : ಚನ್ನಗಿರಿಯಲ್ಲಿ ವಾಸಿಸುತ್ತಿದ್ದ ಹಿರಿಯ ಪತ್ರಕರ್ತ ವೇ.ಕೆ.ಪಿ.ಎಂ. ಸಧ್ಯೋಜಾತಯ್ಯ (79) ಇಂದು(ಶನಿವಾರ) ಬೆಳಿಗ್ಗೆ 6-30 ಕ್ಕೆ ನಿಧನರಾದರು.
ಮೃತರು ರಂಗ ಸೌರಭ ಕಲಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರು ಚಿತ್ರದುರ್ಗದ ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯ ಅವರ ತಂದೆ. ಓರ್ವ ಹೆಣ್ಣು ಮಗಳು, ಐವರು ಗಂಡು ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಅಂತ್ಯಕ್ರಿಯೆಯನ್ನು ಚನ್ನಗಿರಿಯ ವೀರಶೈವ ರುದ್ರಭೂಮಿಯಲ್ಲಿ ಇಂದು(ಶನಿವಾರ) ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











