ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಚಿತ್ರದುರ್ಗ, ಆ. 07 : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಗಳಲ್ಲಿ ಸಾಲು ಸಾಲು ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಭ್ರಷ್ಟಾಚಾರ ನಿಯಂತ್ರಿಸುವ ಬದಲು ಭ್ರಷ್ಟರೊಂದಿಗೆ ಪಾಲುದಾರಿಕೆ ನಡೆಸುತ್ತಿದೆ ಎಂದು ಬಿಜೆಪಿ ಮುಖಂಡರಾದ ಬಿ.ಸಿ.ಹನುಮಂತೇಗೌಡ ಆರೋಪ ಮಾಡಿದ್ದಾರೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಅವ್ಯವಹಾರ ಗಳಿಂದಾಗಿ ಆಯೋಗದ ಮೇಲೆ ಸಾರ್ವಜನಿಕರು ಹಾಗೂ ಉದ್ಯೋಗಾಕಾಂಕ್ಷಿಗಳು ಶೇ. 1ರಷ್ಟು ನಂಬಿಕೆಯನ್ನೂ ಇಡದಂತಹ ವಾತಾವರಣ ನಿರ್ಮಾಣವಾಗಿದೆ ಕರ್ನಾಟಕ ಸರ್ಕಾರದಲ್ಲಿ 2 ಲಕ್ಷ ಹುದ್ದೆಗಳು ಖಾಲಿ ಇದ್ದು ಇವುಗಳನ್ನು ಶೀಘ್ರವಾಗಿ ಭರ್ತಿ ಮಾಡುವÀ ಬಗ್ಗೆ ಅಧಿವೇಶನÀದಲ್ಲಿ ಭರವಸೆಯನ್ನು ನೀಡಲಾಗಿತ್ತು ಅದು ಈಡೇರಿಲ್ಲ ಎಂದು ದೂರಿದರು.

ಇತ್ತೀಚೆಗೆ ಪಶು ವೈದ್ಯಕೀಯ ಅಧಿಕಾರಿ ಹುದ್ದೆಗೆ 80 ಲಕ್ಷ ರೂಪಾಯಿ ಲಂಚದ ಡಿಮಾಂಡ್ ಮಾಡಲಾಗಿದ್ದ ವಿಷಯ ಬಯಲಿಗೆ ಬಂದ ಬೆನ್ನಲ್ಲೇ, ಕೆಎಎಸ್ ಪರೀಕ್ಷೆಯಲ್ಲೂ ಭ್ರಷ್ಟಾಚಾರದ ಆರೋಪ ಹೊರಬಿದ್ದಿದೆ. ಕೆಎಎಸ್ ಪರೀಕ್ಷೆಯಲ್ಲಿ ಕೇವಲ 25 ಅಂಕಗಳಿಗೆ 1.5 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಭ್ರಷ್ಟಾಚಾರವನ್ನು ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಬದಲಿಗೆ ಭ್ರಷ್ಟರ ಜೊತೆಗೆ ಪಾಲುದಾರಿಕೆ ನಡೆಸುತ್ತಾ, ಅವ್ಯವಹಾರಗಳಿಗೆ ಮುಕ್ತ ಲೈಸೆನ್ಸ್ ನೀಡಿದೆ. ಸರ್ಕಾರದ ಈ ಧೋರಣೆಯ ಪರಿಣಾಮವಾಗಿಯೇ ಕೆಪಿಎಸ್‍ಸಿಯಲ್ಲಿ ಯಾವುದೇ ಭಯವಿಲ್ಲದೆ ಸಾಲು ಸಾಲು ಅಕ್ರಮಗಳು ಮುಂದುವರಿಯುತ್ತಿದ್ದು, ಪ್ರಾಮಾಣಿಕ ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಎಂದು ಹನುಮಂತೇಗೌಡ ಆರೋಪಿಸಿದರು.










