KPSC Recruitment: ಹೈದ್ರಬಾದ್ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ

suddionenews
1 Min Read

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಹೈದ್ರಬಾದ್ ಕರ್ನಾಟಕ ವೃಂದದ ಗ್ರೂಪ್-ಬಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 50 ಹುದ್ದೆಗಳಿದ್ದು, ಅರ್ಜಿ ಸಲ್ಲಿಕೆಯನ್ನು ಮುಂದಿನ ತಿಂಗಳು 15ರ ತನಕವೂ ಸಲ್ಲಿಸಬಹುದಾಗಿದೆ. ಸಂಬಳ 43 ಸಾವಿರದಿಂದ ಶುರುವಾಗಲಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ. ಪ್ರವರ್ಗ 2ಎ, ಪ್ರವರ್ಗ 2ಬಿ, ಪ್ರವರ್ಗ 3ಎ, ಪ್ರವರ್ಗ 3ಬಿ 38 ವರ್ಷಗಳನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ, ಪ್ರವರ್ಗ1ಕ್ಕೆ 40 ವರ್ಷಗಳನ್ನು ನಿಗದಿ ಮಾಡಲಾಗಿದೆ.

 

ಪ್ರತಾಂಕಿತ ವ್ಯವಸ್ಥಾಪಕರು/ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು 19. ಕಾರ್ಖಾನೆಗಳ ಸಹಾಯಕ ನಿರ್ದೇಶಕರು 2. ಸಹಾಯಕ ಇಂಜಿನಿಯರ್ 8. ಭೂ ದಾಖಲೆಗಳ ಸಹಾಯಕ ನಿರ್ದೇಶಕರು 3. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕರು 3. ಭೂ ವಿಜ್ಞಾನಿ 15 ಸೇರಿ ಒಟ್ಟು 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ಇಂಜಿನಿಯರ್ ಬಿಬಿಎಂಪಿ 43,100-83,900 ರೂ.ಗಳು. ಭೂ ದಾಖಲೆಗಳ ಸಹಾಯಕ ನಿರ್ದೇಶಕರು 43,100-83,900ರೂ.ಗಳು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕರು 45,300-88,300 ರೂ.ಗಳು. ಭೂ ವಿಜ್ಞಾನಿ ಹುದ್ದೆಗೆ 43,100-83,900 ರೂ.ಗಳ ವೇತನ ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 300 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 150 ರೂ.ಗಳು, ಮಾಜಿ ಸೈನಿಕರಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *