Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೃಷ್ಣಾ ಜಲ ವಿವಾದ : 29ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ..!

Facebook
Twitter
Telegram
WhatsApp

ನವದೆಹಲಿ: ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣವು 2013ರ 2ರಂದು ಅಂತಿಮವಾಗಿ ನೀಡಿರುವ ಐತೀರ್ಪನ್ನು ಕೇಂದ್ರ ಸರ್ಕಾರದ ಗೆಜೆಟ್ ನಲ್ಲಿ ಪ್ರಕಟಿಸಬೇಕೆಂದು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಸಲ್ಲಿಸಿರುವ ಮಧ್ಯಕಾಲೀನ ಅರ್ಜಿಗಳನ್ನು ಇದೇ ತಿಂಗಳ 29ರಂದು ನ್ಯಾಯಾಲಯದ ಕಲಾಪ ಪಟ್ಟಿಯಲ್ಲಿ ಸೇರಿಸಬೇಕೆಂದು ಸರ್ವೋಚ್ಛ ನ್ಯಾಯಾಲಯದ ದ್ವಿಸದಸ್ಯಪೀಠ ಇಂದು ಆದೇಶಿಸಿತು.

ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ನ್ಯಾಯಮೂರ್ತಿ ವೈ.ವಿ.ಚಂದ್ರಚೂಡ್ ಅವರಿದ್ದ ಪೀಠ ಈ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡುವಂತೆ ತೆಲಂಗಾಣ ಮತ್ತು ಆಂಧ್ರ ರಾಜ್ಯಗಳು ಮಾಡಿದ ಮನವಿಯನ್ನು ಪುರಸ್ಕರಿಸಲಾಯಿತು.

ಆದರೆ ಕರ್ನಾಟಕದ ಪರವಾಗಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಶ್ಯಾಮ್ ದಿವಾನ್ ಅವರು ನ್ಯಾಯಾಧಿಕರಣದ ಐತೀರ್ಪಿನ ನಂತರ ಕರ್ನಾಟಕವು 13 ಸಾವಿರ ಕೋಟಿ ರೂಪಾಯಿ ವೆಚ್ಚಮಾಡಿ 1205 ಕಿ.ಮೀ. ಉದ್ದದ ಕಾಲುವೆ ಸರಪಳಿಯನ್ನು ನಿರ್ಮಿಸಿ ಕೊಂಡಿದೆ. ಈ ಕಾಲುವೆಗಳಿಗೆ ಹರಿಯಬೇಕಾದ ನೀರು ಬಂಗಾಳಕೊಲ್ಲಿಗೆ ವ್ಯರ್ಥವಾಗಿ ಹರಿಯುತ್ತಿದೆ. ಆದ್ದರಿಂದ ಈ ಪ್ರಕರಣದ ವಿಚಾರಣೆ ಅತ್ಯಂತ ತುರ್ತಾಗಿ ನಡೆಯಬೇಕಾಗಿದೆ.

ಗೆಜೆಟ್ ಪ್ರಕಟಣೆಗೆ ಮಹತ್ವದ ವಿಷಯವಾಗಿದೆ. ಎರಡು ವಾರಗಳ ನಂತರ ಇದನ್ನು ಪಟ್ಟಿಮಾಡಬೇಕು. ಕರ್ನಾಟಕವು ಗೆಜೆಟ್ ಪ್ರಕಟಣೆ ಕೋರಿ ಸಲ್ಲಿಸಿದ ಮಧ್ಯಕಾಲೀನ ಅರ್ಜಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳಬೇಕೆಂದು ಸರ್ವೋಚ್ಛ ನ್ಯಾಯಾಲಯಕ್ಕೆ ಕರ್ನಾಟಕದ ನ್ಯಾಯವಾದಿ ಶ್ಯಾಮ್ ದಿವಾನ್ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮಹಾರಾಷ್ಟ್ರದ ನ್ಯಾಯವಾದಿಗಳು ಇದೇ ವಿಷಯವಾಗಿ ತಮ್ಮ ರಾಜ್ಯದ ಮಧ್ಯಕಾಲೀನ ಅರ್ಜಿಯನ್ನು ಸಹ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಕೋರಿದರು.

ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳ ಗೆಜೆಟ್ ಪ್ರಕಟಣೆ ಕೋರಿರುವ ಮಧ್ಯಕಾಲೀನ ಅರ್ಜಿಗಳನ್ನು ಇದೇ ತಿಂಗಳ 29ರಂದು ನ್ಯಾಯಾಲಯದ ಕಲಾಪ ಪಟ್ಟಿಗೆ ಸೇರಿಸಬೇಕೆಂದು ಸರ್ವೋಚ್ಛ ನ್ಯಾಯಾಲಯವು ಆದೇಶಿಸಿತು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರವನ್ನು ಈ ಪ್ರಕರಣದಲ್ಲಿ ವಾದಿಯನ್ನಾಗಿಸುವುದಕ್ಕೆ ಕರ್ನಾಟಕವು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ಮಾನ್ಯ ಮಾಡಿತು. ಪ್ರಕರಣವನ್ನು 29ಕ್ಕೆ ಮುಂದೂಡಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

error: Content is protected !!