Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾವೇರಿ ಆರತಿಗೆ ಕೆಆರ್‌ಎಸ್ ಸಜ್ಜು: ಅಕ್ಟೋಬರ್ 11ರಿಂದ 6 ದಿನಗಳ ವೈಭವದ ಸಂಭ್ರಮ

---Advertisement---

ಮಂಡ್ಯ.ಸೆಪ್ಟೆಂಬರ್.25: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಸಕಲ ಸಿದ್ಧತೆಗಳು ನಡೆದಿವೆ. ಅಕ್ಟೋಬರ್ 11ರಿಂದ ಆರಂಭವಾಗಲಿರುವ ಈ ವೈಭವದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

ಕಳೆದ ವರ್ಷದಂತೆ ಈ ಬಾರಿಯೂ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕಾವೇರಿ ಮಾತೆಗೆ ಅದ್ಧೂರಿ ಆರತಿ ಸಮರ್ಪಿಸಲಾಗುತ್ತಿದೆ. ಒಟ್ಟು 6 ದಿನಗಳ ಕಾಲ ನಡೆಯಲಿರುವ ಈ ಉತ್ಸವದಲ್ಲಿ ಕಾವೇರಿ ಆರತಿಯೊಂದಿಗೆ ಸಂಗೀತ ಸಂಜೆ, ಹಾಸ್ಯ ಸಂಜೆ ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಸಾರ್ವಜನಿಕರು ಹಾಗೂ ಪ್ರವಾಸಿಗರು ಯಾವುದೇ ಅಡೆತಡೆಗಳಿಲ್ಲದೆ ಸುಲಭವಾಗಿ ಈ ದೃಶ್ಯವೈಭವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳಲು ಅಗತ್ಯ ಮುಕ್ತ ಪ್ರವೇಶ ಹಾಗೂ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ.

 

Join WhatsApp

Join Now

Join Telegram

Join Now