ವರದಿ ಮತ್ತು ಫೋಟೋ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ನ.11): ಕರ್ನಾಟಕ ರಾಷ್ಟ್ರಸಮಿತಿ ಪಕ್ಷದಿಂದ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ರಾಜ್ಯೋತ್ಸವ ಯಾತ್ರೆ ಶನಿವಾರ ಚಿತ್ರದುರ್ಗಕ್ಕೆ ಆಗಮಿಸಲಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದಂದು ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಿಂದ ಹೊರಟ ಕನ್ನಡ ರಾಜ್ಯೋತ್ಸವ ಯಾತ್ರೆ ಸಂಚಾರದುದ್ದಕ್ಕೂ ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ಬೆಳಕು ಚೆಲ್ಲಲಿದೆ.
ಶನಿವಾರ ಮೊಳಕಾಲ್ಮುರು ತಾಲ್ಲೂಕು ಅಶೋಕ ಸಿದ್ದಾಪುರಕ್ಕೆ ಆಗಮಿಸುವ ಈ ಯಾತ್ರೆ ತಳಕು, ನಾಯಕನಹಟ್ಟಿ ಮೂಲಕ ಮಧ್ಯಾಹ್ನ ಒಂದು ಗಂಟೆಗೆ ಐತಿಹಾಸಿಕ ಚಿತ್ರದುರ್ಗಕ್ಕೆ ಬರಲಿದೆ. ಸಂಜೆ ನಾಲ್ಕು ಗಂಟೆಯತನಕ ಸುತ್ತಾಡಿ ಸಂಜೆ ಆರು ಗಂಟೆಗೆ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ತಲುಪಲಿದೆ ಎಂದು ಹೇಳಿದರು.
ನಾಗೆರಡ್ಡಿ ಬೇಡರೆಡ್ಡಿಹಳ್ಳಿ, ಅಂಜಿನಪ್ಪ ಹೊಳಲ್ಕೆರೆ, ಜಿಲ್ಲಾ ಸಂಚಾಲಕ ಮಹೇಶ್ ಸಿ.ನಗರಂಗೆರೆ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.