ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲೇಬೇಕೆಂದು ಪಣ ತೊಟ್ಟಿದೆ. ಇದೇ ಕಾರಣಕ್ಕೆ ಹೈಕಮಾಂಡ್ ನಾಯಕರೆಲ್ಲಾ ರಾಜ್ಯಕ್ಕೆ ಬಂದು ಪ್ರಚಾರ ಮಾಡಿ ಹೋಗುತ್ತಿದ್ದಾರೆ. ಆದರೆ ಇದೇ ಹೊತ್ತಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವ ಈಶ್ವರಪ್ಪ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸ್ವ ಇಚ್ಛೆಯಿಂದ ರಾಜಕೀಯ ಬಿಡುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
“ಈ ಬಾರಿಯ ವಿಧಾನಸಭಾ ಚುನಾವಣೆಗೆ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೂ ಘೋಷಣೆ ಮಾಡಬಾರದು ಎಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ. ನಾನು ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಕಳೆದ 40ಕ್ಕೂ ಹೆಚ್ಚು ವರ್ಷದಿಂದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪಮುಖ್ಯಮಂತ್ರಿವರೆಗೆ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಅನಂತ ಧನ್ಯವಾದಗಳು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕಮೀಷನ್ ವಿಚಾರಕ್ಕೆ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬಳಿಕ, ರಾಜೀನಾಮೆ ನೀಡಿದ್ದ ಈಶ್ವರಪ್ಪ ಬಳಿಕ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಸಾಹಸಪಟ್ಟಿದ್ದರು. ಆದ್ರೆ ಈಗ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.