ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಜನವರಿ.04 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಪಕ್ಷ ಸಂಘಟನಾ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿದ್ದರು. ಇಂದು ಪಕ್ಷದ ಮುಖ್ಯ ವಕ್ತಾರರು ಹಾಗೂ ವಕ್ತಾರರನ್ನು ನೇಮಿಸಿ ಆದೇಶಿಸಿದ್ದಾರೆ.
ಈ ಪಟ್ಟಿಯಲ್ಲಿ ಚಿತ್ರದುರ್ಗ – ದಾವಣಗೆರೆ ವಿಧಾನ ಪರಿಷತ್ ಸದಸ್ಯರಾದ ಕೆ ಎಸ್ ನವೀನ್ ಅವರು ರಾಜ್ಯ ಬಿಜೆಪಿ ವಕ್ತಾರರಾಗಿ ನೇಮಕಗೊಂಡಿದ್ದಾರೆ.
ನವೀನ್ ಅವರು ಈ ಹಿಂದೆ ಸಂಘ ಪಾರಿವಾರದ ಧರ್ಮ ಜಾಗರಣದಲ್ಲಿ ಸೇವೆ ಸಲ್ಲಿಸಿದ್ದು ನಂತರ ಬಿಜೆಪಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ನಂತರ 2017 ರಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿ, ನಂತರ 2019 ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾಗಿ, ತುಮಕೂರು ದಾವಣಗೆರೆ ಚಿತ್ರದುರ್ಗ ಜಿಲ್ಲೆಗಳ ಪ್ರಭಾರಿಯಾಗಿ, 2021 ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ ಅವರನ್ನು ಮುಖ್ಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಹರಿಪ್ರಕಾಶ್ ಕೋಣೆಮನೆ, ಛಲವಾದಿ ನಾರಾಯಣಸ್ವಾಮಿ, ಡಾ. ತೇಜಸ್ವಿನಿ ಗೌಡ, ಎಂ.ಜಿ. ಮಹೇಶ್, ಎಚ್.ಎನ್. ಚಂದ್ರಶೇಖರ್, ಡಾ. ನರೇಂದ್ರ ರಂಗಪ್ಪ, ಕು. ಸುರಭಿ ಹೊದಿಗೆರೆ, ಅಶೋಕ್ ಕೆ.ಎಂ. ಗೌಡ, ಎಚ್. ವೆಂಕಟೇಶ್ ದೊಡ್ಡೇರಿ ಅವರನ್ನು ಆಯ್ಕೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್