ವಿಧಾನಪರಿಷತ್‌  ಸದಸ್ಯರಾಗಿ ಕೆ.ಎಸ್.ನವೀನ್ ಪ್ರಮಾಣ ವಚನ ಸ್ವೀಕಾರ

0 Min Read

ಚಿತ್ರದುರ್ಗ, (ಜ.06): ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಚಿತ್ರದುರ್ಗ-ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಸ್.ನವೀನ್ ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ವಿಧಾನಪರಿಷತ್ ಸಭಾಧ್ಯಕ್ಷ ಬಸವರಾಜ್‌ಹೊರಟ್ಟಿ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಸಂದರ್ಭದಲ್ಲಿ ಕೆ.ಎಸ್.ನವೀನ್‌ಗೆ ಶುಭ ಹಾರೈಸಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಉಪಾಧ್ಯಕ್ಷ ಸಂಪತ್‌ಕುಮಾರ್. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜೈಪಾಲಯ್ಯ, ರಾಜೇಶ್‌ ಬುರುಡೆಕಟ್ಟೆ, ಸುರೇಶ್‌ ಸಿದ್ದಾಪುರ, ಕಾರ್ಯದರ್ಶಿ ನರೇಂದ್ರ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *