ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2026ನೇ ಸಾಲಿನ ಕುಲಪತಿ ಹುದ್ದೆ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಮೈಸೂರಿನಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ ಅನುಭವಿ ಶಿಕ್ಷಣ ತಜ್ಞರಿಗೆ ಇದು ಮಹತ್ವದ ಅವಕಾಶವಾಗಿದೆ.ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ನಿಗದಿತ ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಮಾನದಂಡಗಳನ್ನು ಪೂರೈಸಿರಬೇಕು.
ನೇಮಕಾತಿ ಪ್ರಕ್ರಿಯೆ ಕರ್ನಾಟಕ ಸರ್ಕಾರದ ನಿಯಮಾನುಸಾರ ನಡೆಯಲಿದ್ದು, ಆಯ್ಕೆಯಾದವರಿಗೆ ನಿಯಮಾನುಸಾರ ವೇತನ ಹಾಗೂ ಸೌಲಭ್ಯಗಳು ಲಭ್ಯವಾಗಲಿವೆ.ಆಸಕ್ತರು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅಗತ್ಯ ದಾಖಲೆಗಳೊಂದಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಯನ್ನು ‘ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಪಿಬಿ ಸಂಖ್ಯೆ 5033, ಲೋಕ ಭವನ, ಬೆಂಗಳೂರು – 560001’ ವಿಳಾಸಕ್ಕೆ ಕಳುಹಿಸಬೇಕಿದ್ದು, ಅದರ ಸಾಫ್ಟ್ ಕಾಪಿಯನ್ನು us.university.rb@karnataka.gov.in ಇಮೇಲ್‌ಗೆ ಕಳುಹಿಸುವುದು ಕಡ್ಡಾಯವಾಗಿದೆ.ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅನುಭವ ಹೊಂದಿದವರಿಗೆ ಈ ನೇಮಕಾತಿ ಮಹತ್ವದ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ವಿಶ್ವವಿದ್ಯಾಲಯ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











