Connect with us

Hi, what are you looking for?

ಪ್ರಮುಖ ಸುದ್ದಿ

ಸೌರಿಗೆ ನೌಕರರು ಕೆಲಸಕ್ಕೆ ಗೈರಾದರೆ ಸಂಬಳ ಕಡಿತ; ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಎಚ್ಚರಿಕೆ

ಬೆಂಗಳೂರು :ನಾಳೆ ಸಾರಿಗೆ ನೌಕರರ ಮುಷ್ಕರ ಮಾಡಲು ಮುಂದಾದರೆ ಸಾರಿಗೆ ಇಲಾಖೆಯಿಂದ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.

ಮುಷ್ಕರದ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯ ಸಾರಿಗೆ 4 ನಿಗಮಗಳ  ಎಂಡಿಗಳ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ಬಳಿಕ ಮಾತನಾಡಿದ ರವಿಕುಮಾರ್,

ಕೊವಿಡ್ ಕಾರಣಕ್ಕೆ ಮುಷ್ಕರ ಮಾಡದಂತೆ ಸಾರಿಗೆ ಇಲಾಖೆ ನೌಕರರಲ್ಲಿ ಮನವಿ ಮಾಡುತ್ತೇವೆ. ಈ ವಿಚಾರದಲ್ಲಿ ಸಂಧಾನ ಪ್ರಶ್ನೆಯೇ ಇಲ್ಲ. ಬಸ್‌ಗಳಿಗೆ ಹಾನಿ ಮಾಡಿದರೆ ಪೊಲೀಸ್ ಆ್ಯಕ್ಟ್, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. 6ನೇ ವೇತನ ಆಯೋಗ ಜಾರಿಗೆ ಮನವಿ ಮಾಡಿದ್ದಾರೆ. ಆದರೆ ನೀತಿಸಂಹಿತೆ ಜಾರಿಯಾದ ಕಾರಣ 6ನೇ ವೇತನ ಆಯೋಗದ ಬೇಡಿಕೆ ಈಡೇರಿಸಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾರಿಗೆ ಇಲಾಖೆಗೆ ಆದಾಯ ಇಲ್ಲದಿದ್ದರೂ ಲಾಕ್‌ಡೌನ್ ಸಮಯದಲ್ಲೂ ಸಂಬಳ ನೀಡಲಾಗಿದೆ. ನಾಳೆ ಪ್ರತಿಭಟನೆಗೆ ಮುಂದಾದರೆ ಎಸ್ಮಾ ಜಾರಿ ಮಾಡುವ ಸಂಬಂಧವೂ ಚರ್ಚಿಸಿದ್ದೇವೆ. ಸೌರಿಗೆ ನೌಕರರು ಕೆಲಸಕ್ಕೆ ಗೈರಾದರೆ, ಯಾವುದೇ ಮುಲಾಜಿಲ್ಲದೆ ಸಂಬಳ ಕಡಿತ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಕೋವಿಡ್ ಕಾರಣಕ್ಕೆ ಸಾರಿಗೆ ಇಲಾಖೆಯಿಂದ ನಿತ್ಯ 4 ಕೋಟಿ ನಷ್ಟವಾಗುತ್ತಿದೆ. ಇದರ ನಡುವೆಯೂ ನಾವು ನೌಕರರ ಹಿತದೃಷ್ಟಿಯಿಂದ ಸಂಬಳ ನೀಡುತ್ತಿದ್ದೇವೆ. ಒಂದು ವೇಳೆ ಮಾತು ಮೀರಿ ಪ್ರತಿಭಟನೆ ನಡೆಸಿದರೆ ಎಲ್ಲ ದರ ನಿಗದಿಗೊಳಿಸಿ ಖಾಸಗಿ ವಾಹನ ಓಡಿಸುವುದಕ್ಕೆ ಅನುಮತಿ ನೀಡುತ್ತೇವೆ ಎಂದು ತಿಳಿಸಿದರು.

ಸಭೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಸಾರಿಗೆ ಇಲಾಖೆ ಆಯುಕ್ತ ಅಜುಂ ಪರ್ವೇಜ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!