Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

KSRTC ಬಸ್ ನಿಂದ ಅಪಘಾತ ಕೇಸ್ ; ಸಾಗರ ಕೋರ್ಟ್ ನಿಂದ ಬಸ್ ಜಪ್ತಿ ಆದೇಶ..!

---Advertisement---

 

ಶಿವಮೊಗ್ಗ; ಕೋರ್ಟ್ ಆದೇಶಕ್ಕೂ ಕ್ಯಾರೆ ಎನ್ನದ ಕೆಎಸ್ಆರ್ಟಿಸಿ ಬಸ್ ಗೆ ಸರಿಯಾದ ಶಿಕ್ಷೆಯನ್ನ ಸಾಗರ ಕೋರ್ಟ್ ವಿಧಿಸಿದೆ‌. ಅಪಘಾತ ಮಾಡಿಯೂ ಪರಿಹಾರ ನೀಡದ ಕೆಎಸ್ಆರ್ಟಿಸಿ ಬಸ್ ಅನ್ನು ಜಪ್ತಿ ಮಾಡುವಂತೆ ಶಿವಮೊಗ್ಗ ಜಿಲ್ಲೆಯ ಸಾಗರ ಕೋರ್ಟ್ ನಿಂದ ಬಸ್ ಜಪ್ತಿಯ ಆದೇಶ ನೀಡಿದೆ. ಅಷ್ಟಕ್ಕೂ ಅಂಥ ಘಟನೆ ಏನು ಎಂಬುದರ ಮಾಹಿತಿ ಇಲ್ಲಿದೆ ನೋಡಿ.

2022ರ ಜುಲೈ 7ರಂದು ಬೆಳಗಿನ ಜಾವ ಕೆಎಸ್ಆರ್ಟಿಸಿ ಬಸ್ ನಿಂದ ಒಂದು ಅಪಘಾತ ನಡೆದಿತ್ತು. ಗಣೇಶ್ ಎಂಬಾತ ಬೆಳಗಿನ ಜಾವ ಸೈಕಲ್ ಏರಿ ಪೇಪರ್ ಹಾಕಿ, ಮನೆಗೆ ಸಹಾಯ ಮಾಡುತ್ತಿದ್ದ. ಆದರೆ ಅಂದು ಪ್ರವಾಸಿ ಮಂದಿರದ ಎದುರು ಕೆಎಸ್ಆರ್ಟಿಸಿ ಬಸ್ ಸೈಕಲ್ ಗೆ ಡಿಕ್ಕಿ ಹೊಡೆದುದರ ಪರಿಣಾಮ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದ. ಮೃತ ಗಣೇಶ್ ಪೋಷಕರು ಪರಿಹಾರಕ್ಕಾಗಿ ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅಂದು ಕೋರ್ಟ್ ಕೂಡ ಮೃತ ಕುಟುಂಬಕ್ಕೆ 19 ಲಕ್ಷ ಪರಿಹಾರ ನೀಡುವಂತೆ 2024ರ ಜುಲೈ 8ರಂದು ನ್ಯಾಯಾಲಯವೂ ಆದೇಶ ನೀಡಿತ್ತು. ಆದರೆ ಪರಿಹಾರ ಹಣವನ್ನು ಮಾತ್ರ ಕೆಎಸ್ಆರ್ಟಿಸಿ ಇಲ್ಲಿಯವರೆಗೂ ನೀಡಿಲ್ಲ.

ಇದರಿಂದ ನೊಂದ ಗಣೇಶನ ತಾಯಿಉಮಾ ಅವರು ನ್ಯಾಯಾಲಯಕ್ಕೆ ಅಮಲ್ಜಾರಿ ಅರ್ಜಿ ಸಲ್ಲಿಕೆ ಮಾಡಿದರು. ಈ ಅರ್ಜಿ ಸಂಬಂಧ ಕೆಎಸ್ಆರ್ಟಿಸಿ ಗೆ ಮತ್ತೆ ನೋಟೀಸ್ ಜಾರಿ ಮಾಡಲಾಯ್ತು. ಆದರೂ ಪರಿಹಾರದ ಹಣ ಮಾತ್ರ ನೀಡಲಿಲ್ಲ. ಇದೀಗ ಕೋರ್ಟ್ ಸೀರಿಯಸ್ ಆಗಿ ನಿರ್ಧಾರ ತೆಗೆದುಕೊಂಡಿದ್ದು, ಶಿರಸಿ ಡಿಪೋಗೆ ಸೇರಿದ ಬಸ್ ಅನ್ನು ಜಪ್ತಿ ಮಾಡಿ, ನ್ಯಾಯಾಲಯದ ಆವರಣದಲ್ಲಿಯೇ ನಿಲ್ಲಿಸಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment