ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ನಡೆದಿದೆ. ಚಲಿಸುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಗುಂಡಿಗೆ ಬಿದ್ದಿದೆ. ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಇಂದು ನಡೆದಿದೆ.
ಚಳ್ಳಕೆರೆಯಿಂದ ತಿಪ್ಪಾರೆಡ್ಡಿ ಹಳ್ಳಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತವಾಗಿದೆ. ತಾಲ್ಲೂಕಿನ ಕಾಮಸಮುದ್ರ ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಅಲ್ಲೆ ರಸ್ತೆಯ ಬದಿಯ ಗುಂಡಿಗೆ ಬಿದ್ದಿದೆ. ಗುಂಡಿಗೆ ಬಿದ್ದ ಪರಿಣಾಮ ಬಸ್ಸಿನ ಮುಂದಿನ ಗಾಜು ಒಡೆದು ಹೋಗಿದೆ. ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಇವರಲ್ಲಿ ಮೂವರಿಗೆ ಕಾಲು ಮುರಿದಿದೆ, ಉಳಿದ ಹಲವರಿಗೆ ಸಣ್ಣಪುಟ್ಟ ಗಾಯಗಳಿದ್ದು ಅಪಾಯದಿಂದ ಪಾರಾಗಿದ್ದಾರೆ. ಅಘಾತದ ರಭಸಕ್ಕೆ ಪ್ರಯಾಣಕರು ಆತಂಕಗೊಂಡಿದ್ದಾರೆ. ಸದ್ಯ ಆ ಘಟನೆಯಿಂದ ಹೊರಬರಲು ಪ್ರಯತ್ನ ಪಡುತ್ತಿದ್ದು, ಸುಧಾರಿಸಿಕೊಳ್ಳುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















