ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಲ್ಲಿದ್ದ ಏಳು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ಸಮೀಪ ನಡೆದಿದೆ. 12 ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಪಘಾತದಲ್ಲಿ ಮೃತ ಪಟ್ಟ ಬಾಲಕ ಮೂಲತಃ ತುಮಕೂರಿನ ಗುಬ್ಬಿ ನಿವಾಸಿ ಎಂದು ಹೇಳಲಾಗುತ್ತಿದೆ. ಬಾಲಕನನ್ನು ಪ್ರಮೋದ್ ಎಂದು ಗುರುತಿಸಲಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಮೃತ ಪಟ್ಟಿದ್ದಾನೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಡಿಕ್ಕಿ ಹೊಡೆದ ಬಸ್ ಬೆಂಗಳೂರಿನಿಂದ ಶಿವಮೊಗ್ಗ ಕಡೆಗೆ ಪ್ರಯಾಣಕರನ್ನು ಹೊತ್ತು ಹೊರಟಿತ್ತು. ಆದರೆ ಚಿಕ್ಕಮಗಳೂರು ಸಮೀಪ ಇಂಥ ದುರ್ಘಟನೆ ನಡೆದು ಹೋಗಿದೆ. ಬಾಲಕ ಸಾವು ಎಲ್ಲರನ್ನು ದುಃಖಿತರನ್ನಾಗಿಸಿದೆ. ಈ ಸಂಬಂಧ ತರಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






