Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೆ.ಟಿ.ಕುಮಾರಸ್ವಾಮಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕ : ಚಳ್ಳಕೆರೆಯಲ್ಲಿ ಸಂಭ್ರಮಾಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ,
ಮೊ : 9739875729

ಸುದ್ದಿಒನ್, ಚಳ್ಳಕೆರೆ, ಜೂನ್. 12 : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪಕ್ಷದ ಎಸ್‌ಟಿ ಮೋರ್ಚ ಕಾರ್ಯದರ್ಶಿಯೂ ಆಗಿದ್ದ ಕೆ.ಟಿ.ಕುಮಾರಸ್ವಾಮಿ ಅವರು ಬಿಜೆಪಿ ಜಿಲ್ಲಾ ಘಟಕದ ನೂತನ ಅಧಕ್ಷರಾಗಿ ನೇಮಕಗೊಂಡಿದ್ದಾರೆ.

ಮಾಜಿ ಸಚಿವ, ದಿ.ತಿಪ್ಪೇಸ್ವಾಮಿ ಅವರ ಪುತ್ರರೂ ಆಗಿರುವ ಕುಮಾರಸ್ವಾಮಿ ಈ ಹಿಂದೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರೂ ಆಗಿದ್ದರು.‌ ಚಳ್ಳಕೆರೆ ವಿಧಾನಸಭೆ ಎಸ್‌ಟಿ ಮೀಸಲು ಕ್ಷೇತ್ರದಿಂದ 3 ಬಾರಿ ಸ್ಪರ್ಧಿಸಿ ಸೋಲು ಕಂಡಿದ್ದರು. 2013ರಲ್ಲಿ ಕೆಜೆಪಿಯಿಂದ, 2018ರಲ್ಲಿ ಬಿಜೆಪಿ, 2023ರಲ್ಲಿ ಪಕ್ಷೇತರ ಅಬ್ಯರ್ಥಿಯಾಗಿ ಸೋತಿದ್ದರು. ಬಳಿಕ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದರು. ನಂತರ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಇವರನ್ನು ಜಿಲ್ಲಾ ಘಟಕದ ಆಯ್ಕೆ ಮಾಡಲಾಗಿದ್ದು ಹಲವಾರು ವರ್ಷಗಳ ಬಳಿಕ ಚಳ್ಳಕೆರೆಗೆ ಜಿಲ್ಲೆಯ ಅಧ್ಯಕ್ಷ ಸ್ಥಾನ ಸಿಕ್ಕಿರುವುದರಿಂದ ಚಳ್ಳಕೆರೆ ನಗರದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ನಗರದ ನೆಹರು ಸರ್ಕಲ್ ವಾಲ್ಮೀಕಿ ಸರ್ಕಲ್ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಈ ಸಂದರ್ಭದಲ್ಲಿ ಚಳ್ಳಕೆರೆ ಬಿಜೆಪಿ ಮುಖಂಡರಾದ ರಾಮದಾಸ್, ಜಯಪಾಲಯ್ಯ ಶಿವಸುಪುತ್ರಪ್ಪ, ಎಬಿವಿಪಿ ಮಂಜುನಾಥ್ . ಕಾಟಯ್ಯ ಮಂಡಿ ಶ್ರೀನಿವಾಸ್, ಚಿದಾನಂದ ಡಾ. ರಾಮರಾಜು ಟಿ ಜೆ ತಿಪ್ಪೇಸ್ವಾಮಿ, ದಿನೇಶ್ ರೆಡ್ಡಿ ,ನಾಗೇಂದ್ರಪ್ಪ,ಮಹಿಳಾ ಘಟಕದ ಜಗದಾಂಬ ಸಹನ ,ಸೇರಿದಂತೆ ಬಿಜೆಪಿ ಮುಖಂಡರು ಕಾರ್ಯಕರ್ತರು ಮಹಿಳಾ ಘಟಕದ ಸದಸ್ಯರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...