ಸುದ್ದಿಒನ್, ಚಳ್ಳಕೆರೆ, ಮಾರ್ಚ್. 03 : ನಗರದ ಬಿಡಿಎ ಕಚೇರಿ ಸಮೀಪದ ನಿವಾಸಿ ಡಾ.ಕೆ.ಟಿ. ಸ್ವಾಮಿ (92 ವರ್ಷ) ಭಾನುವಾರ ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಮೃತರು ಚಳ್ಳಕೆರೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷರಾಗಿ, ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಕಾರ್ಯದರ್ಶಿಯಾಗಿ ಸಾಮಾಜಿಕ ಸೇವೆ ಸಲ್ಲಿಸಿದ್ದಾರೆ. ಸೋಮವಾರ ನಗರದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


