Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಕ್ಕೆ ಸುಬ್ರಮಣ್ಯ ಪವಾಡ : ಕತ್ರೀನಾ ಕೈಫ್ ಗರ್ಭಿಣಿ

---Advertisement---

ದಕ್ಷಿಣ ಕನ್ನಡ: ನಮ್ಮ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಲ್ಲಿ ಕುಕ್ಕೆ ಸುಬ್ರಮಣ್ಯ ಕೂಡ ಒಂದು. ಅದರಲ್ಲೂ ಇಲ್ಲಿಗೆ ಬಂದು ಪೂಜೆ ಮಾಡಿ ಹೋದರೆ ಇರುವಂತಹ ಸರ್ಪ ದೋಷ ದೂರವಾಗುತ್ತದೆ. ಹೀಗಾಗಿಯೇ ಸಾಕಷ್ಟು ಜನ ಸರ್ಪ ದೋಷ ನಿವಾರಣೆಗಾಗಿ ಕುಕ್ಕೆಗೆ ಭೇಟಿ ನೀಡುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೈಫ್ ಗುಡ್ ನ್ಯೂಸ್ ನೀಡಿದ್ದಾರೆ. ತಾವೂ ಗರ್ಭಿಣಿ ಎಂಬುದನ್ನ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಗೆ ಮದುವೆಯಾದ ಮೇಲೆ ಮಕ್ಕಳಾಗಿರಲಿಲ್ಲ. ಕತ್ರೀನಾಗೂ 42 ವಯಸ್ಸಾಗ್ತಾ ಇತ್ತು. ಟ್ರೀಟ್ಮೆಂಟ್ ತೆಗೆದುಕೊಂಡರು ಯಾವುದೇ ಪ್ರಯೋಜನವಾಗಿರಲಿಲ್ಲ. ಬಳಿಕ ಜ್ಯೋತಿಷ್ಯ ಶಾಸ್ತ್ರದ ಮೊರೆ ಹೋಗಿದ್ದರು. ಅಲ್ಲಿ ಕತ್ರಿನಾ ಜಾತಕ ನೋಡಿದ ಜ್ಯೋತಿಷ್ಯರು, ಸರ್ಪ ದೋಷ ಇರುವುದನ್ನು ತಿಳಿಸಿದ್ದಾರೆ. ಸರ್ಪ ದೋಷಕ್ಕಾಗಿ ಕರ್ನಾಟಕದಲ್ಲಿರುವ ಕುಕ್ಕೆ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋದರೆ ದೋಷ ಪರಿಹಾರವಾಗುತ್ತದೆ ಎಂಬುದನ್ನು ತಿಳಿಸಿದ್ದಾರೆ.

ಕುಟುಂಬಸ್ಥರೆಲ್ಲರು ಸೇರಿ ಮಾರ್ಚ್ ತಿಂಗಳಲ್ಲಿ ಕರ್ನಾಟಕಕ್ಕೆ ಬಂದಿದ್ದರು. ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಮಾಡಿಸಿದ್ದರು. ನಾಗ ದೇವರಿಗೆ ಪರಿಹಾರ ಪೂಜೆಯನ್ನು ಮಾಡಿಸಿ ಹೋಗಿದ್ದರು. ಇದೀಗ ಅದಕ್ಕೆ ಉತ್ತರವಾಗಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕತ್ರಿನಾ ಕೈಫ್ ಗರ್ಬಿಣಿಯಾಗಿದ್ದಾರೆ. ಮದುವೆಯಾಗಿ ನಾಲ್ಕು ವರ್ಷವಾಗಿತ್ತು. ಅಂದಿನಿಂದ ಸಂತಾನ ಭಾಗ್ಯಕ್ಕಾಗಿ ಸಾಕಷ್ಟು ಪೂಜೆಗಳನ್ನ ಮಾಡಿದ್ದರು. ಯಾವುದೇ ಪ್ರಯೋಜನವಾಗಿರಲಿಲ್ಲ. ಆದ್ರೆ ಕುಕ್ಕೆ ಸುಬ್ರಮಣ್ಯಕ್ಕೆ ಬಂದು ಇಲ್ಲಿಯೇ ಒಂದು ದಿನ ವಾಸ್ತವ್ಯ ಹೂಡಿದ್ದರು. ಸದ್ಯ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿಗೆ ನವೆಂಬರ್ ತಿಂಗಳಿಗೆ ಮಗುವಿನ ದರ್ಶನವಾಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now