Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರ ಕೃಪಾ ಅತಿಥಿ ಗೃಹ ಇನ್ಮುಂದೆ  ‘ಗಂಗಾ’ ಎಂದು ಮರುನಾಮಕರಣ: ರಾಜ್ಯ ಸರ್ಕಾರ ಆದೇಶ

Kumara Krupa Guest House renamed 'Ganga': State Government issues order
---Advertisement---

ಬೆಂಗಳೂರು :  ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಸರ್ಕಾರಿ ವಸತಿ ಗೃಹವಾದ ಕುಮಾರ ಕೃಪಾ ಅತಿಥಿ ಗೃಹದ ಹಳೆಯ ಕಟ್ಟಡವನ್ನು ರಾಜ್ಯ ಸರ್ಕಾರವು ಮಾನ್ಯ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಎಂದು ಘೋಷಿಸಿದೆ. ಈ ಹಳೆಯ ಕಟ್ಟಡಕ್ಕೆ ಇನ್ನು ಮುಂದೆ “ಗಂಗಾ” ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಆಗಮಿಸುವ ಗಣ್ಯರನ್ನು ಬರಮಾಡಿಕೊಳ್ಳಲು, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಹಾಗೂ ವಿವಿಧ ಸಭೆ ಮತ್ತು ಕಾರ್ಯಕ್ರಮಗಳನ್ನು ಸುಗಮವಾಗಿ ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಅಲ್ಲದೆ, ಕಡತಗಳನ್ನು ಇ-ಆಫೀಸ್ ತಂತ್ರಾಂಶದಲ್ಲಿ ನಿರ್ವಹಿಸುವ ಜೊತೆಗೆ ಸ್ವೀಕರಿಸಲಾಗುವ ದಾಖಲೆ ಪತ್ರಗಳನ್ನು ವ್ಯವಸ್ಥಿತವಾಗಿ ನಿಭಾಯಿಸಲು ಈ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಸರ್ಕಾರದ ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ.

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳು ಸಲ್ಲಿಸಿದ್ದ ಟಿಪ್ಪಣಿಯ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್. ತಿಪ್ಪೇಸ್ವಾಮಿ ಅವರು ಈ ಅಧಿಕೃತ ಆದೇಶವನ್ನು ಪ್ರಕಟಿಸಿದ್ದಾರೆ. ಈ ಆದೇಶದ ಪ್ರತಿಯನ್ನು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೂ ರವಾನಿಸಲಾಗಿದೆ.

Join WhatsApp

Join Now

Join Telegram

Join Now