Connect with us

Hi, what are you looking for?

ಪ್ರಮುಖ ಸುದ್ದಿ

ಶಾಂತಿ ಕಾಲದಲ್ಲಿ ಕಲಹ, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು : ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಸದ್ಯ ಕೊರೊನ ಎರಡನೇ ಅಲೆ ಅಬ್ಬರ ಜೋರಾಗಿದೆ. ಸರ್ಕಾರ ಲಾಕ್ಡೌನ್ ಮಾಡಿದೆ. ಈ ಮಧ್ಯೆ ಲಸಿಕೆ ಹಾಕಿಸಿಕೊಳ್ಳೋದಕ್ಕೂ ಜನ ಮುಗಿಬಿದ್ದಿದ್ದಾರೆ. ಆದ್ರೆ ಲಸಿಕೆಯ ಕೊರತೆ ಹೆಚ್ಚಾಗಿದೆ. ಈ ಬಗ್ಗೆ ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದ್ದ ಬಗ್ಗೆ , ಇದೀಗ ಮಾಜಿ ಸಿಎಂ ಎಚ್ ಡಿ‌ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್‌ನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್‌ನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್‌ ಕೊಡಬೇಕೆನಿಸಿದೆ.

ಕೋವಿಡ್‌ ಲಸಿಕೆ ವಿಚಾರದಲ್ಲಿನ ಕಾಂಗ್ರೆಸ್‌ನ ಆತ್ಮವಂಚನೆಯನ್ನು ಪ್ರಸ್ತಾಪಿಸಿದ್ದಕ್ಕೆ ನಾನು ಸ್ವಯಂ ಗೋಲು ಹೊಡೆದುಕೊಂಡಿರುವುದಾಗಿ ನೀವು ಹೇಳಿದ್ದೀರಿ. ಸಿದ್ದರಾಮಯ್ಯನವರೇ ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ, ನಿಂತಿರುವುದು ಕಾಂಗ್ರೆಸ್‌. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್‌ ವಿಕೆಟ್‌ ಆಗಿದ್ದೀರಿ.

ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ. ಇದನ್ನೇ ಅಲ್ಲವೇ ನಾನು ಹೇಳಿದ್ದು?.

ಕಾಂಗ್ರೆಸ್‌ನ ಲಸಿಕೆ ರಾಜಕಾರಣವನ್ನು ನಾನು ವಿವರಿಸಿದ್ದೇನೆ. ಕಾಂಗ್ರೆಸ್‌ನ ಅಪಪ್ರಚಾರದಿಂದ ಜನ ಲಸಿಕೆ ಹಾಕಿಸಿಕೊಳ್ಳುತ್ತಿಲ್ಲ ಎಂದು ನಾನು ಹೇಳಿಲ್ಲ. ಲಸಿಕೆಗಾಗಿ ಜನರು ಸಿದ್ದರಾಗಿಯೇ ಇದ್ದಾರೆ. ಕಾಂಗ್ರೆಸ್‌ ಹೇಳಿದ ಮಾತ್ರಕ್ಕೆ ಜನ ಲಸಿಕೆಯಿಂದ ವಿಮುಖರಾಗಿಲ್ಲ. ಜನ ಕಾಂಗ್ರೆಸ್‌ ಮಾತು ಕೇಳುತ್ತಾರೆ ಎಂಬ ಭ್ರಮೆ ಸಿದ್ದರಾಮಯ್ಯನವರಿಗೆ ಬೇಡ.

ಲಸಿಕೆಯೊಂದು ಸಿಕ್ಕಾಗ ಅದನ್ನು ಮೊದಲಿಗೆ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ. ಇದು ನಿಮಗೆ ತಿಳಿದಿರಲಿ. ದೇಶದಲ್ಲಿ ಮೊದಲು ಕೋವಿಡ್‌ ವಾರಿಯರ್‌ಗಳಿಗೆ ಲಸಿಕೆ ನೀಡಲಾಯಿತು. ನನ್ನ ಸರದಿ ಬಂದಾಗ ನಾನು ಲಸಿಕೆ ಪಡೆದೆ. ಇಲ್ಲಿ ಕಾಂಗ್ರೆಸ್‌ ಮಾತು ನಂಬಿ ಕೂರುವಂಥದ್ದೇನಿತ್ತು. ಕಾಂಗ್ರೆಸ್‌ ಮಾತನ್ನು 50 ವರ್ಷದಿಂದಲೂ ಕೇಳದ ಕುಟುಂಬ ನಮ್ಮದು!

ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್‌.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೇ, ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು, ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ.

ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ? ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ.

ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ, ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ನಾನು ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್‌ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್‌ನ ಇಬ್ಬಗೆ ನೀತಿ.

ಸೋಂಕು ಹೆಚ್ಚುತ್ತಿದ್ದರೂ, ಲಾಕ್‌ಡೌನ್‌ ಜಾರಿಯಲ್ಲಿ ಇದ್ದರೂ ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಬೀದಿಗೆ ಬಿದ್ದಿದ್ದಾರೆ. ಜನರಿಗೆ ನೆರವಾಗುವುದು ಇವರ ಉದ್ದೇಶವಲ್ಲ. ರಾಜಕೀಯ ಮೈಲೇಜ್‌ ಪಡೆಯುವುದು ಇವರ ಉದ್ದೇಶ. ಜೊತೆಗೆ ಸಿಎಂ ಆಗುವ ಕನಸುಗಳು. ಶಾಂತಿ ಕಾಲದಲ್ಲಿ ಕಾಂಗ್ರೆಸ್‌ ಕಲಹಕ್ಕೆ ಇಳಿದು ಲಾಭ ಪಡೆಯುತ್ತದೆ ಎಂಬುದಕ್ಕೆ ಇದು ಸಾಕ್ಷಿ.

ಲಸಿಕೆಗಾಗಿ ₹  100 ಕೋಟಿ ಕೊಟ್ಟಿದ್ದಾಗಿ ಕಾಂಗ್ರೆಸ್‌ ಹೇಳುತ್ತಿದೆ. ಇದೇನು ಸಿದ್ದರಾಮಯ್ಯನವರ ಮನೆ ಗಂಟೇ? ಕಾಂಗ್ರೆಸ್‌ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ನಿಧಿಯಲ್ಲವೇ? ಕ್ಷೇತ್ರಾಭಿವೃದ್ಧಿ ನಿಧಿಯನ್ನು ಸರ್ಕಾರಕ್ಕೇ ನೀಡಿರುವುದಾಗಿ ಹೇಳಬೇಕಿದ್ದ ಕಾಂಗ್ರೆಸ್‌, ಲಸಿಕೆಗಾಗಿ ಕೈಯಿಂದ 100 ಕೋಟಿ ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ?.

ನಾನು ದೇವೇಗೌಡರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು ಎಂದು ನೀವು ಹೇಳಿದ್ದೀರಿ. ದೇವೇಗೌಡರ ಸಲಹೆಯಂತೇ ನಾನು ಸೇರಿದಂತೆ ಪಕ್ಷ ನಡೆಯುತ್ತೇವೆ. ಅದನ್ನು ಹೇಳುತ್ತಿರುವ ತಾವು ಗೌಡರ ಸಲಹೆಯಂತೆ ನಡೆದುಕೊಂಡಿದ್ದೀರೇ? ಸಿದ್ದರಾಮಯ್ಯನವರೇ ಹೇಳಲು ಬಹಳಷ್ಟಿದೆ. ನಾನು ಸುಳ್ಳಾಡಲಾರೆ. ಅದು ನಿಮಗೆ ಹೇಗೆ ಕಾಣುತ್ತದೆ ಎಂಬುದು ನನಗೆ ಅಪ್ರಸ್ತುತ. ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!