Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಗೆ ನಾನೇ ವಿಲನ್ ಎಂದು ಒಪ್ಪಿಕೊಂಡ ಕುಮಾರಸ್ವಾಮಿ..!

---Advertisement---

 

 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ವಿಲನ್ ಆಗದೆ ಸ್ನೇಹಿತನಾಗಲು ಸಾಧ್ಯವೆ ಎಂದು ಹೇಳುವ ಮೂಲನ ಮಾಜಿ ಸಿಎಂ ಕುಮಾರಸ್ವಾಮಿ ನಾನೇ ವಿಲನ್ ಏನಿವಾಗ ಎಂದು ಪ್ರಶ್ನಿಸಿದ್ದಾರೆ.

 

ನಾನು ಸಿಎಂ ಆಗಿದ್ದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೇ ಅವರ ಅಹವಾಲನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಾ ಇದ್ದರು. ಅಂಥವರು ನನ್ನನ್ನು ವಿಲನ್ ಎನ್ನುತ್ತಾರೆ. ಕಾಂಗ್ರೆಸ್ ನಾಯಕರು ನನ್ನನ್ನು ಸಿಎಂ ಎಂಬ ಗೌರವ ಇಲ್ಲದೆ ಪಪೇಟ್ ರೀತಿ ನಡೆಸಿಕೊಳ್ಳುತ್ತಿದ್ದರು. ನನಗೆ ಅಪಮಾನ ಮಾಡಿದರು. ತಾಜ್ ನಲ್ಲಿ ಇದ್ದೆ ಅಂತ ನಂಗೆ ಪದೇ ಪದೇ ಹೇಳ್ತಾರಲ್ಲ, ನಾನು ತಾಜ್ ನಲ್ಲಿ ಮೋಜು ಮಸ್ತಿ ಮಾಡುವುದಕ್ಕೆ ಹೋಗಿರಲಿಲ್ಲ. ಅಭಿವೃದ್ಧಿ ಬಗ್ಗೆ ಚರ್ಚೆ ಮಾಡ್ತಾ ಇದ್ದೆ. ನನ್ನ ಬಳಿ ಎಲ್ಲಾ ದಾಖಲೆಗಳು ಇದೆ. ನನ್ನ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಅವರೇ. ಅದರಲ್ಲಿ ಎರಡು ಮಾತಿಲ್ಲ ಎಂದಿದ್ದಾರೆ.

 

ಅಪ್ಪ ನಿಮಗೊಂದು ನಮಸ್ಕಾರ. 14 ತಿಂಗಳು ನನ್ನನ್ನು ಅಧಿಕಾರದಲ್ಲಿ ಇಟ್ಟಿದ್ದಕ್ಕೆ ನಮೋ ನಮಃ.ಜನರ ಸೇವೆ ಮಾಡಲು ಅವಕಾಶ ಕೊಟ್ಟಿದ್ದಕ್ಕೆ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಎಲ್ಲಾ ಕಡೆಯಲ್ಲೂ ಗ್ಯಾರಂಟಿ ಕೊಡಿತ್ತಿದೆ ಕಾಂಗ್ರೆಸ್. ಈ ಕಾರಣಕ್ಕಾಗಿಯೇ ಎಲ್ಲಾ ಯೋಜನೆಗಳು ಹಳ್ಳ ಹಿಡಿದಿರುವುದು‌. ನಿಮ್ಮ ಗ್ಯಾರಂಟಿಗಳ ಬಗ್ಗೆ ಜನ ಛೀ ಥೂ ಅಂತ ಉಗಿಯೋ ಕಾಲ ಬರುತ್ತೆ ಎಂದು ಗ್ಯಾರಂಟಿಗಳ ಬಗ್ಗೆಯೂ ಕುಮಾರಸ್ವಾಮಿ ಮಾತನಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment