Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳು ವಿಳಂಬವಾಗ್ತಿರೋದಕ್ಕೆ ಕಾರಣ ಕೊಟ್ರು ಕುಮಾರಸ್ವಾಮಿ..!

---Advertisement---

ತುಮಕೂರು: ಸ್ಥಳೀಯ ಮಟ್ಟದಲ್ಲಿ ನಡೆಯಬೇಕಾದ ಚುನಾವಣೆಗಳ ಬಿಸಿ ಇಷ್ಟೊತ್ತಿಗೆ ಶುರುವಾಗಬೇಕಿತ್ತು. ಆದರೆ ಅದರ ಸುಳಿವು ಸಿಕ್ತಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಅವರು ನೇರವಾಗಿ ರಾಜ್ಯ ಸರ್ಕಾರವನ್ನ ದೂಷಿಸಿದ್ದಾರೆ. ಕರ್ನಾಟಕದಲ್ಲಿ ತಾಲೂಕು, ಜಿಲ್ಲಾ ಪಂಚಾಯತಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸರ್ಕಾರ ಚುನಾವಣಾ ಆಯೋಗಕ್ಕೆ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಚುನಾವಣೆ ನಡರಯಲ್ಲ ಎಂಬ ಮಾತನ್ನ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಹದಗೆಡಿಸಿದೆ. ಗ್ರೇಟರ್ ಬೆಂಗಳೂರು ಎಲೆಕ್ಷನ್ ಮಾಡುವುದಕ್ಕೂ ಈ ಸರ್ಕಾರಕ್ಕೆ ಹಣವಿಲ್ಲ. ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯನ್ನು ಜೂನ್ 30ರ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ. ಜಾತಿಗಣತಿ ಮತ್ತು ಮತದಾರರ ಪಟ್ಟಿಯ ತಿದ್ದುಪಡಿ ಕಾರ್ಯಗಳಲ್ಲಿ ಸಿಬ್ಬಂದಿ ನಿರತರಾಗಿರುವುದು ಹಾಗೂ ಹಣಕಾಸಿನ ಕೊರತೆಯೇ ಇದಕ್ಕೆ ಕಾರಣವಾಗಿದೆ.

 

ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಉಚಿತ ಗ್ಯಾರಂಟಿಗಳನ್ನು ನೀಡಿದೆ ಸರಿ, ಆದರೆ ಈ ಗ್ಯಾರಂಟಿಗಳಿಂದ ಖಜಾನೆಯನ್ನು ಖಾಲಿ ಮಾಡಿದೆ. ಈಗಾಗಲೇ ರಾಜ್ಯದ ಒಟ್ಟು 7,26,000 ಲಕ್ಷ ಕೋಟಿ ಮೀರಿದೆ. ಪ್ರತಿ ಕನ್ನಡಿಗನ ಮೇಲೆಯೂ ತಲಾ ಒಂದು ಲಕ್ಷ ರೂಪಾಯಿ ಸಾಲವಿದೆ. ಈ ಸಾಲವನ್ನು ತೀರಿಸುವುದು ಹೇಗೆ? ಇಂತಹ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸಾಧ್ಯ ಆಗುತ್ತದೆಯೇ? ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯುವುದಿಲ್ಲ. ಗ್ರೇಟರ್ ಬೆಂಗಳೂರು ಎಲೆಕ್ಷನ್ ಕೂಡ ಆಗುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸರ್ಕಾರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now