ಹುಬ್ಬಳ್ಳಿ: ಕುಮಾರಸ್ವಾಮಿ ಹಿಟ್ ಎಂಡ್ ರನ್ ಕೇಸ್ ಗಿರಾಕಿ. ಅವರು ಯಾವಾಗಲೂ ಬರೀ ಸುಳ್ಳೇ ಹೇಳೋದು ಹಾಗಾಗಿ ಅವರ ಮಾತುಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ನಿರ್ಧಾರ ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈ ವೇಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾನು ಅಲ್ಪಸಂಖ್ಯಾತರಿಗೆ ಮೋಸ ಮಾಡಿದ್ದೀನಾ ಬಿಟ್ಟಿದೀನಾ ಎಂದು ನಮ್ಮ ಪಕ್ಷದ ಅಲ್ಪಸಂಖ್ಯಾತ ನಾಯಕರು ಹೇಳ್ತಾರೆ, ನಾನು ಈ ಬಗ್ಗೆ ಮಾತನಾಡಲ್ಲ ಎಂದರು.
ಕಾಂಗ್ರೆಸ್ ಕಚೇರಿಯಿಂದ ಎಲ್ಲರಿಗೂ ಪ್ರಚಾರಕ್ಕೆ ಬರುವಂತೆ ಪತ್ರ ಕಳಿಸಿದ್ದಾರೆ, ಸಿ.ಎಂ ಇಬ್ರಾಹಿಂ ಅವರಿಗೆ ಚುನಾವಣಾ ಪ್ರಚಾರಕ್ಕೆ ಬರಬೇಡಿ ಎಂದು ಯಾರೂ ಹೇಳಿಲ್ಲ. ಮುಂದೆ ಅವರು ಬಂದರೂ ಬರಬಹುದು.
ಆರ್.ಎಸ್.ಎಸ್ ಒಂದು ಕೋಮುವಾದಿ ಸಂಘಟನೆ, ಅವರು ಮನುಸ್ಮೃತಿ ಮತ್ತು ಶ್ರೇಣೀಕೃತ ವ್ಯವಸ್ಥೆ ಪರವಾಗಿದ್ದಾರೆ. ನಾನು 1971 ರಲ್ಲಿ ರಾಜಕೀಯಕ್ಕೆ ಬಂದಾಗಿನಿಂದ ಈ ಸಂಘಟನೆಯನ್ನು ವಿರೋಧಿಸುತ್ತಾ ಬಂದಿದ್ದೇನೆ. ಆರ್.ಎಸ್.ಎಸ್ ಸ್ಥಾಪನೆಯಾದ ದಿನದಿಂದ ಇಂದಿನವರೆಗೆ ಅವರ ಇತಿಹಾಸವನ್ನು ನೋಡಿದರೆ ಅವರು ಸಮಾಜ ಒಡೆಯುವವರು ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ‘ಸಬ್ ಕ ಸಾಥ್, ಸಬ್ ಕ ವಿಕಾಸ್’ ಎಂಬುದು ಬರಿ ಸುಳ್ಳು. ಬಿಜೆಪಿ ಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ, ಕ್ರಿಶ್ಚಿಯನ್ ಶಾಸಕ ಇದ್ದಾರ? ಯಾಕೆ ಅವರಿಗೆ ಪಕ್ಷದ ಟಿಕೆಟ್ ಕೊಡಲ್ಲ? ಎಂದು ಪ್ರಶ್ನೆ ಮಾಡಿದರು.